News

ಮದ್ಯಪ್ರಿಯರ ಹೋರಾಟ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆ ಪ್ರತಿಭಟನೆ, ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ…!

ರಾಜ್ಯದ ಆದಾಯದ ಮೂಲಗಳಲ್ಲಿ ಅತ್ಯಂತ ಪ್ರಮುಖವಾದುದು ಮದ್ಯಪಾನ ಎಂದೇ ಹೇಳಬಹುದಾಗಿದೆ. ಮದ್ಯಪ್ರಿಯರೂ ಸಹ ತಮ್ಮವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ವತಿಯಿಂದ ಮದ್ಯಪ್ರಿಯರಿಗಾಗಿ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಳಗಾವಿ ಸುವರ್ಣ ಗಾರ್ಡನ್ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಜ್ಯದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅನೇಕ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ಮಾದರಿಯಲ್ಲಿ ನಿತ್ಯ ದುಡಿ, ಸತ್ಯ ನುಡಿ, ಸ್ವಲ್ಪ ಕುಡಿ, ಮನೆಗೆ ನಡಿ ಎಂಬ ಘೋಷಣೆಯೊಂದಿಗೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿರುತ್ತಾರೆ. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್ ಶಾಕ್ ಆಗಿದ್ದಾರೆ. ಮದ್ಯಪಾನ ಪ್ರಿಯರ ಬೇಡಿಕೆಗಳನ್ನು ಕಂಡ ಸಚಿವ ಸಂತೊಷ್ ಲಾಡ್ ಸುಸ್ತೋಸುತ್ತಾಗಿದ್ದಾರೆ. ಸಚಿವರ ಮುಂದೆ ರಾಜ್ಯದಲ್ಲಿ ಕುಡುಕರಿಗೆ ಆಗುವಂತಹ ಅನ್ಯಾಯದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಕುಡುಕರ ಅಭಿವೃದ್ದಿ ನಿಗಮ ಸ್ಥಾಪನೆ ಮಾಡುವುದು, ಡಿ.31 ರಂದು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡುವುದು, ಅಂದು ಎಲ್ಲಾ ರೀತಿಯ ಬಾರ್‍ ಹಾಗೂ ರೆಸ್ಟೋರೆಂಟ್ ನಲ್ಲಿ ಶೇ.50 ರಷ್ಟು ರಿಯಾಯಿತಿ ಹಾಗೂ ಕುಡುಕ ಎಂಬ ಪದಬಳಕೆ ನಿಷೇಧ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಮದ್ಯಪ್ರಿಯರ ಪ್ರಮುಖ ಬೇಡಿಕೆಗಳು: ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಿ ಮದ್ಯ ಮಾರಾಟದಿಂದ ಬರುವ ಆದಾಯದ ಶೇಕಡ 10ರಷ್ಟು ಮೀಸಲಿಡಬೇಕು. ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಉಚಿತ ಚಿಕಿತ್ಸೆ ಕೊಡಿಸಬೇಕು, ಎಮ್.ಆರ್.ಪಿ ದರದಲ್ಲಿ ಮದ್ಯ ಮಾರಾಟ ಮಾಡಬೇಕು, ಹೆಚ್ಚು ಹಣ ಪಡೆದರೆ ಲೈಸೆನ್ಸ್ ರದ್ದು ಮಾಡಬೇಕು. ಡ್ರಿಂಕ್ & ಡ್ರೈವ್ ಪ್ರಕರಣ ಹಾಕಿ ಸಾವಿರಾರು ರೂ. ದಂಡ ಸ್ವೀಕರಿಸುವುದು ನಿಲ್ಲಬೇಕು, ಮದ್ಯ ಸೇವಿಸಿ ಮೃತಪಟ್ಟರೆ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು, ಬಾರ್‌ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ, ಮದ್ಯಪ್ರಿಯರ ಭವನ ಸ್ಥಾಪಿಸಬೇಕು ಪ್ರತಿ ಬಾಟಲ್ ಮೇಲೆ ಹಣ ಪಡೆದು ಇನ್ಸುರೆನ್ಸ್ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

Most Popular

To Top