Film News

ನಂದಮೂರಿ ಬಾಲಕೃಷ್ಣ ಸಿನೆಮಾದಲ್ಲಿ ನಟಿಸಲಿದ್ದಾರೆ ಪುನೀತ್ ರಾಜ್ ಕುಮಾರ್

ಹೈದರಾಬಾದ್: ಸುಮಾರು ವರ್ಷಗಳಿಂದ ನಟ ರಾಜಕುಮಾರ್ ಕುಟುಂಬದೊಂದಿಗೆ ಹತ್ತಿರದ ಸಂಬಂಧ ಹೊಂದಿರುವ ನಂದಮೂರಿ ಕುಟುಂಬದ ಸ್ಟಾರ್ ನಟ ಬಾಲಕೃಷ್ಣರವರ ಸಿನೆಮಾದಲ್ಲಿ ಪುನೀತ್ ರಾಜಕುಮಾರ್ ನಟಿಸಲಿದ್ದಾರಂತೆ.

ನಂದಮೂರಿ ಬಾಲಕೃಷ್ಣ ಅಭಿನಯದ ಐತಿಹಾಸಿಕ ಹಿನ್ನೆಲೆಯುಳ್ಳ ಚಿತ್ರವಾದ ’ಗೌತಮಿ ಪುತ್ರ ಶಾತಕರ್ಣಿ’ ಚಿತ್ರದಲ್ಲಿ ನಟ ಶಿವರಾಜ್ ಕುಮಾರ್  ರವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಬಾಲಕೃಷ್ಣ ರವರೊಂದಿಗೆ ಪುನೀತ್ ರಾಜಕುಮಾರ್ ನಟಿಸಲಿದ್ದಾರೆ. ಬೋಯಪಾಟಿ ಶ್ರೀನಿವಾಸ್ ನಿರ್ದೇಶನ ಮಾಸ್ ಸಿನೆಮಾವೊಂದರಲ್ಲಿ ಬಾಲಕೃಷ್ಣ ನಟಿಸುತ್ತಿದ್ದು, ಈ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅತಿಥಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಈ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಪುನೀತ್ ರಾಜಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಅನೇಕ ತೆಲುಗು ಚಿತ್ರಗಳಲ್ಲಿ ಕನ್ನಡದ ಸ್ಟಾರ್ ನಟರು ನಟಿಸಿದ್ದು, ಸುದೀಪ್, ಉಪೇಂದ್ರ ಸೇರಿದಂತೆ ಅನೇಕ ನಟರು ತೆಲುಗು ಸೇರಿದಂತೆ ತಮಿಳು, ಹಿಂದಿ ಚಿತ್ರಗಳಲ್ಲಿ ನಟಿಸಿ ಅಲ್ಲಿಯೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಗಳಿಸುತ್ತಿದ್ದಾರೆ.

Trending

To Top