Film News

ಅಭಿಮಾನಿಗಳಿಗೆ ಕ್ಷಮೆ ಕೇಳಿದ ರಾಧಿಕಾ ಪಂಡಿತ್ !

ನಟಿ ರಾಧಿಕಾ ಪಂಡಿತ್ ಸೋಷಿಯಲ್ ಮೀಡಿಯದಲ್ಲಿ ಬಹಳ ಆಕ್ಟಿವ್ ಆಗಿರುತ್ತಾರೆ. ಮಕ್ಕಳ ಫೋಟೋ ಶೇರ್ ಮಾಡುತ್ತಾ, ಅಭಿಮಾನಿಗಳ ಜೊತೆ ಹೆಚ್ಚಾಗಿ ಸಂಪರ್ಕದಲ್ಲಿ ಇರುತ್ತಾರೆ. ಆದರೆ ಈಗ ಕರೊನಾ ಎರಡನೇ ಅಲೆಯಿಂದ ರಾಜ್ಯ ತತ್ತರಿಸಿ ಹೋಗಿದೆ. ಈ ಸಮಯದಲ್ಲಿ ನಟ ಯಶ್ 1.5 ಕೋಟಿ ಸಹಾಯವನ್ನು ಕನ್ನಡ ಚಿತ್ರರಂಗದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಘೋಷಿಸಿದರು.

ಹೇಳಿದಂತೆಯೇ ನಡೆದುಕೊಂಡರು. ನಟಿ ರಾಧಿಕಾ ಪಂಡಿತ್ ಸಹ ಕಷ್ಟದಲ್ಲಿ ಇರುವ ಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ಇದ್ದಾರೆ. ಹಾಗಾಗಿ ಕಳೆದ ಕೆಲವು ದಿನಗಳಿಂದ ಅವರು ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಲು ಸಾಧ್ಯವಾಗಿಲ್ಲ. ಇದರ ಬಗ್ಗೆ ಒಂದು ಪೋಸ್ಟ್ ಮಾಡಿರುವ ರಾಧಿಕಾ, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

“ಇದು ಕಷ್ಟದ ಸಮಯ…. ನಾವೆಲ್ಲರೂ ತುಂಬ ನೋವು ಅನುಭವಿಸಿದ್ದೇವೆ. ಆತ್ಮೀಯರನ್ನು ಕಳೆದುಕೊಂಡಿದ್ದೇವೆ. ನಮ್ಮೆಲ್ಲರಿಗೂ ಭಯ, ಹತಾಶೆ ಕಾಡುತ್ತಿದೆ. ನಾಳೆ ಏನಾಗುತ್ತದೋ ಎಂಬ ಆತಂಕ ಇದೆ ಎಂಬುದು ನನಗೆ ತಿಳಿದಿದೆ. ಆದರೆ ದಯವಿಟ್ಟು ಒಂದು ಮಾತನ್ನು ಪ್ರತಿ ದಿನ ನಿಮಗೆ ನೀವೇ ಹೇಳಿಕೊಳ್ಳಿ. ಪರಿಸ್ಥಿತಿ ಎಷ್ಟೇ ಕೆಟ್ಟದಾಗಿದ್ದರೂ ನಾವು ಭರವಸೆ ಇಡುತ್ತೇವೆ, ನಂಬಿಕೆ ಇಡುತ್ತೇವೆ, ಜೊತೆಯಾಗಿ ಹೋರಾಡುತ್ತೇವೆ. ಎಲ್ಲರೂ ಜೊತೆಯಾಗಿ ನಿಂತು ಈ ಕಷ್ಟದಿಂದ ಹೊರಬರುತ್ತೇವೆ..” ಎಂದು ಬರೆದು ಅಭಿಮಾನಿಗಳಿಗೆ ಕ್ಷಮೆ ಕೇಳಿ ಭರವಸೆ ತುಂಬಿದ್ದಾರೆ.

https://www.instagram.com/p/CPyF5DEAnlm/?utm_medium=copy_link

Trending

To Top