News

ಕಾಂಗ್ರೇಸ್ ಅಧಿಕಾರಕ್ಕೆ ಬಂದರೇ 30 ಲಕ್ಷ ಸರ್ಕಾರಿ ಉದ್ಯೋಗ, ಮತಷ್ಟು ಗ್ಯಾರಂಟಿಗಳನ್ನು ಕೊಟ್ಟ ರಾಹುಲ್ ಗಾಂಧಿ……!

ಲೋಕಸಭೆ – 2024 ರಲ್ಲಿ ಕಾಂಗ್ರೇಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್‌ಆಯ್ ಯಾತ್ರೆ ದೇಶದಾದ್ಯಂತ ನಡೆಯುತ್ತಿದೆ. ಅನೇಕ ಗ್ಯಾರಂಟಿಗಳನ್ನು ಸಹ ಯಾತ್ರೆಯ ಸಮಯದಲ್ಲಿ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡುತ್ತಿದ್ದಾರೆ. ಜೊತೆಗೆ ಅವರ ಕೆಲವೊಂದು ಹೇಳಿಕೆಗಳು ಸಹ ವಿವಾದಕ್ಕೆ ಗುರಿಯಾಗುತ್ತಿರುತ್ತವೆ. ಇದೀಗ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.

ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಆಯೋಜಿಸಿದ್ದು, ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುವಕರು, ಬಡವರು ಹಾಗೂ ಇತರೆ ವರ್ಗಗಳಿಗೆ ಪಕ್ಷದ ಕಾರ್ಯಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಕಾಂಗ್ರೇಸ್ ಪಕ್ಷ ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ನೀಡಲಿದೆ. ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿದೆ. ಪ್ರಧಾನಿ ಮೋದಿಯವರು ಈ ಹುದ್ದೆಗಳನ್ನು ತುಂಬುವ ಕೆಲಸ ಮಾಡಿಲ್ಲ. ಆದ್ದರಿಂದ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೇ ನಾವು ಮೊದಲು 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುತ್ತೇವೆ. ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಘೋಷಣೆ ಮಾಡಿ, ಅದರಡಿಯಲ್ಲಿ ಯುವಕರಿಗೆ ಒಂದು ವರ್ಷ ತರಬೇತಿ ನೀಡಲಾಗುತ್ತದೆ. ತರಬೇತಿ ಸಮಯದಲ್ಲಿ ರೂಪಾಯಿ 1 ಲಕ್ಷ ಸ್ಟೈಫಂಡ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಇನ್ನೂ ಇದೇ ಸಮಯದಲ್ಲಿ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಮಾತನಾಡಿ, ರೈತರಿಗೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ನೀಡುವಂತಹ ಗ್ಯಾರಂಟಿಗಳ ಬಗ್ಗೆ ತಿಳಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಪ್ರಣಾಳಿಕೆಯಂತೆ ರೈತರಿಗೆ ಕನಿಷ್ಟ ಬೆಂಬಲ ಬೆಲೆಗೆ ಕಾನೂನು ಖಾತರಿಯನ್ನು ನೀಡುತ್ತೇವೆ. ನೀರು ಹಾಗೂ ಅರಣ್ಯಕ್ಕಾಗಿ ಆದಿವಾಸಿಗಳ ಹೋರಾಟ ನಮ್ಮ ಹೋರಾಟವಾಗಿದೆ. ನಾವು ನಿಮ್ಮೊಂದಿಗೆ ಇದ್ದೀವಿ. ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಬಡವರ ಪರ ಕೆಲಸ ಮಾಡುವ, ಬಡವರ ಪರ ಕಾಳಜಿ ವಹಿಸುವ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

Most Popular

To Top