ಬೆಂಗಳೂರು: ದುನಿಯಾ ಚಿತ್ರದ ಮೂಲಕ ಖ್ಯಾತಿ ಪಡೆದ ಸ್ಯಾಂಡಲ್ ವುಡ್ ನಟ ನಿರ್ದೇಶನದ ಸಲಗ ಚಲನಚಿತ್ರ ಶೂಟಿಂಗ್ ಮುಗಿದಿದ್ದು, ತೆರೆಗೆ ಬರಲು ಸಿದ್ದವಾಗಿದೆ. ಜನವರಿ ಮೊದಲ ವಾರದಲ್ಲಿ ಸಲಗ ಚಿತ್ರದ ಟೈಟಲ್ ಹಾಡು ಬಿಡುಗಡೆ ಮಾಡಲು ಚಿತ್ರ ತಂಡ ಮುಂದಾಗಿದೆಯಂತೆ.
ಸಲಗ ಸಿನೆಮಾ ಈಗಾಗಲೇ ಮೇಕಿಂಗ್ ಹಾಗೂ ಹಾಡುಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭಾರಿ ಸದ್ದು ಮಾಡಿದ್ದು, ಪ್ರಸ್ತುತ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಇನಷ್ಟು ಸದ್ದು ಮಾಡಲಿದೆ ಎನ್ನಲಾಗಿದೆ. ಚರಣ್ ರಾಜ್ ಸಂಗೀತ ನಿರ್ದೇಶನದಲ್ಲಿ ಚಿತ್ರಿಕರಿಸಿದ ಈ ಹಾಡು ಜನವರಿಯ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ.
ಇನ್ನೂ ಸೂರಿ ಅಣ್ಣಾ, ಮಳೆ ಮಳೆಯೇ ಹಾಗೂ ಸಂಜನಾ ಐ ಲವ್ ಯೂ ಹಾಡುಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿರುವ ಸಲಗ ತಂಡ ಇದೀಗ ಟೈಟಲ್ ಸಾಂಗ್ ಬಿಡುಗಡೆಯಾಗಲಿದ್ದು, ಈ ಹಾಡಿಗೆ ಸಂಚಿತ್ ಹೆಗಡೆ ಹಾಗೂ ಯೋಗಿ ದನಿಯಾಗಿದ್ದಾರೆ. ಇನ್ನೂ ಈ ಚಿತ್ರವನ್ನು ದುನಿಯಾ ವಿಜಯ್ ನಿರ್ದೇಶಿಸುತ್ತಿದ್ದು, ಕೆ.ಪಿ. ಶ್ರೀಕಾಂತ್ ನಿರ್ಮಾಣ ಮಾಡಲಿದ್ದಾರೆ. ಮುಖ್ಯವಾಗಿ ಡಾಲಿ ಖ್ಯಾತಿಯ ಧನಂಜಯ್ ವಿಜಯ್ ಜೊತೆ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಸಂಜನಾ, ಪ್ರಮುಖ ನಟರಾಗಿ ಅಚ್ಯುತ್ ಕುಮಾರ್, ತ್ರಿವೇಣಿ ರಾವ್ ಸೇರಿದಂತೆ ಹಲವರು ನಟಿಸಿದ್ದಾರೆ.
