Film News

ಶ್ವೇತ ವರ್ಣದ ಡ್ರೆಸ್ ನಲ್ಲಿ ದೇವಕನ್ಯೆಯಂತೆ ಕಾಣಿಸಿಕೊಂಡ ಲೀಲಾ, ಸ್ಟೈಲಿಷ್ ಲುಕ್ಸ್ ನಲ್ಲಿ ಕಾಣಿಸಿಕೊಂಡ ಸಪ್ತಮಿ ಗೌಡ….!

ಸ್ಯಾಂಡಲ್ ವುಡ್ ನಲ್ಲಿ ಇತ್ತಿಚಿಗೆ ತೆರೆಕಂಡ ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನೆಮಾ ಈಗಾಗಲೇ ದೊಡ್ಡ ಕ್ರೇಜ್ ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸಿನೆಮಾ ರಂಗಗಳ ಸೆಲೆಬ್ರೆಟಿಗಳಿಗೂ ಸಹ ಈ ಸಿನೆಮಾವನ್ನು ಮನಸಾರೆ ಹೊಗಳಿದ್ದಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಆಗಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸ್ಟೈಲಿಷ್ ಡ್ರೆಸ್ ನಲ್ಲಿ ಲೀಲಾ ಮಿಂಚಿದ್ದಾರೆ. ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ವೈಟ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ನಟಿ ಸಪ್ತಮಿ ಗೌಡ ಪಾಪ್ ಕಾರ್ನ್ ಮಂಕಿ ಟೈಗರ್‍ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಸಪ್ತಮಿ ಗೌಡ ರಿಷಭ್ ಶೆಟ್ಟಿಯವರ ಕಾಂತಾರ ಸಿನೆಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್‍ ಆದರು. ಕಾಂತಾರ ಸಿನೆಮಾದ ಬಳಿಕ ಸಪ್ತಮಿ ಗೌಡ ರವರಿಗೆ ಭಾರಿ ಆಫರ್‍ ಗಳು ಹುಡುಕಿಕೊಂಡು ಬರುತ್ತಿವೆ. ಈ ಹಾದಿಯಲ್ಲೇ ಆಕೆ ವಿವೇಕ್ ಅಗ್ನಿಹೋತ್ರಿ ರವರ ದಿ ವ್ಯಾಕ್ಸಿನ್ ವಾರ್‍ ಸಿನೆಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇದರ ಜೊತೆಗೆ ಕಾಳಿ ಎಂಬ ಕನ್ನಡ ಸಿನೆಮಾದಲ್ಲಿ ಅಭಿಷೇಕ್ ಅಂಬರೀಶ್ ಜೊತೆಗೂ ನಟಿಸುತ್ತಿದ್ದಾರೆ. ಇನ್ನೂ ಸಾಲು ಸಾಲು ಸಿನೆಮಾಗಳ ನಡುವೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರ ನಿದ್ದೆಗೆಡಿಸುತ್ತಿರುತ್ತಾರೆ.

ಕಾಂತಾರ ಸಿನೆಮಾದಲ್ಲಿ ಲೀಲಾ ಪಾತ್ರದಲ್ಲಿ ಕಾಣಿಸಿಕೊಂಡ ಸಪ್ತಮಿ ಕಡಿಮೆ ಸಮಯದಲ್ಲೇ ಭಾರಿ ಕ್ರೇಜ್ ಪಡೆದುಕೊಂಡು ‌ಪ್ಯಾನ್ ಇಂಡಿಯಾ ಸ್ಟಾರ್‍ ಆದರು. ಇನ್ನೂ ಇತ್ತಿಚಿಗೆ ನಡೆದ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಸಪ್ತಮಿ ಗೌಡ ವೈಟ್ ಡ್ರೆಸ್ ನಲ್ಲಿ ದೇವಕನ್ಯೆಯಂತೆ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಸೈಮಾ ಅವಾರ್ಡ್ ಗೆದ್ದ ಖುಷಿಯಲ್ಲಿ ಸಪ್ತಮಿ ಗೌಡ ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೈಟ್ ಕಲರ್‍ ಸ್ಟೈಲಿಷ್ ಡ್ರೆಸ್ ನಲ್ಲಿ ಸಪ್ತಮಿ ಹಾಟ್ ಅಂಡ್ ಬ್ಯೂಟಿಪುಲ್ ಆಗಿ ಮಾದಕ ನೋಟ ಬೀರಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top