Film News

ಗ್ರಾಂಡ್ ಲೆಹಂಗಾದಲ್ಲಿ ಬ್ಯೂಟಿಪುಲ್ ಲುಕ್ಸ್ ಕೊಟ್ಟ ಸಪ್ತಮಿ ಗೌಡ, ಟ್ರೆಡಿಷಿನಲ್ ಲುಕ್ಸ್ ನಲ್ಲಿ ಕಾಣಿಸಿಕೊಂಡು ಯುವಕರನ್ನು ಫಿದಾ ಮಾಡಿದ ಚೆಲುವೆ……!

ಇತ್ತಿಚಿಗೆ ತೆರೆಕಂಡ ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನೆಮಾ ಈಗಾಗಲೇ ದೊಡ್ಡ ಕ್ರೇಜ್ ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ದೇಶದ ಅನೇಕ ಸಿನೆಮಾ ರಂಗಗಳ ಸೆಲೆಬ್ರೆಟಿಗಳಿಗೂ ಸಹ ಈ ಸಿನೆಮಾವನ್ನು ಮನಸಾರೆ ಹೊಗಳಿದ್ದಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಆಗಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಸ್ಪೇಷಲ್ ಪೊಟೋಶೂಟ್ಸ್ ಮೂಲಕ ಫಾಲೋವರ್ಸ್‌ಗಳನ್ನು ರಂಜಿಸುತ್ತಿದ್ದಾರೆ. ಇದೀಗ ಟ್ರೆಡಿಷನಲ್ ಲುಕ್ಸ್ ನಲ್ಲಿ ಕಾಣಿಸಿಕೊಂಡು ಯುವಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ.

ಬಹುಬೇಡಿಕೆ ನಟಿ ಸಪ್ತಮಿ ಗೌಡ ಪಾಪ್ ಕಾರ್ನ್ ಮಂಕಿ ಟೈಗರ್‍ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಸಪ್ತಮಿ ಗೌಡ ರಿಷಭ್ ಶೆಟ್ಟಿಯವರ ಕಾಂತಾರ ಸಿನೆಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್‍ ಆದರು. ಕಾಂತಾರ ಸಿನೆಮಾದ ಬಳಿಕ ಸಪ್ತಮಿ ಗೌಡ ರವರಿಗೆ ಭಾರಿ ಆಫರ್‍ ಗಳು ಹುಡುಕಿಕೊಂಡು ಬರುತ್ತಿವೆ. ಈ ಹಾದಿಯಲ್ಲೇ ಆಕೆ ವಿವೇಕ್ ಅಗ್ನಿಹೋತ್ರಿ ರವರ ದಿ ವ್ಯಾಕ್ಸಿನ್ ವಾರ್‍ ಸಿನೆಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇದರ ಜೊತೆಗೆ ಕಾಳಿ ಎಂಬ ಕನ್ನಡ ಸಿನೆಮಾದಲ್ಲಿ ಅಭಿಷೇಕ್ ಅಂಬರೀಶ್ ಜೊತೆಗೂ ನಟಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಪೊಟೋಶೂಟ್ಸ್ ಹಾಗೂ ವಿಡಿಯೋ ಮೂಲಕ ಅಭಿಮಾನಿಗಳು ಹಾಗೂ ನೆಟ್ಟಿಗರನ್ನು ರಂಜಿಸುತ್ತಿದ್ದಾರೆ.

ನಟಿ ಸಪ್ತಮಿ ಗೌಡ ದೊಡ್ಮನೆಯ ಯುವ ರಾಜ್​ ಕುಮಾರ್, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಯುವ ಸಿನಿಮಾದಲ್ಲಿ ಯುವ ರಾಜ್ ಕುಮಾರ್‍ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಇದೀಗ ಆಕೆ ಟ್ರೆಡಿಷನಲ್ ಲುಕ್ಸ್ ನಲ್ಲಿ ಮಿಂಚಿದ್ದಾರೆ. ಡಿಸೈನರ್‍ ಲೆಹಂಗಾ ತೊಟ್ಟು ಸಪ್ತಮಿ ಗೌಡ ಪಿಂಕ್ ಕಲರ್‍ ಲೆಹಂಗಾದಲ್ಲಿ ಕಾಣಿಸಿಕೊಂಡಿದ್ದಾರೆ. ಲೆಹಂಗಾ ಧರಿಸಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ಹಾಗೂ ಪೊಟೋಶೂಟ್ಸ್ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಆಕೆ ಯುವ ಸಿನೆಮಾದ ಹಾಡಿನ ಟಚ್ ಕೊಟ್ಟು ಎಡಿಟ್ ಮಾಡಿದ್ದಾರೆ. ಇನ್ನೂ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಏನೋ ಹೇಳಿದ ನಾನು ಹೊಸತರ ಎಂದು ಕಾಮೆಂಟ್ಸ್ ಮಾಡುತ್ತಿದ್ದಾರೆ. ಜೊತೆಗೆ ದೇವಲೋಕದ ಅಪ್ಸರೆ, ಸೋ ಬ್ಯೂಟಿಪುಲ್ ಎಂಬೆಲ್ಲಾ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಕಾಂತಾರ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್‍ ಆದರು. ಇದೀಗ ಕಾಂತಾರ ಚಾಪ್ಟರ್‍ -1 ರಲ್ಲೂ ಸಹ ಸಪ್ತಮಿ ಗೌಡ ನಟಿಸಲಿದ್ದಾರೆ ಎನ್ನಲಾಗುತ್ತದೆ. ಸದ್ಯ ಆಕೆ ಅಭಿನಯದ ಯುವ ಸಿನೆಮಾ ಇದೇ ಮಾ.29 ರಂದು ರಿಲೀಸ್ ಆಗಲಿದೆ. ಈ ಸಿನೆಮಾದ ಟ್ರೈಲರ್‍ ಸಹ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆಯಾಗಿದ್ದು, ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡಿದೆ. ಸಿನೆಮಾದ ಪ್ರಮೋಷನ್ ನಲ್ಲೂ ಸಹ ಪುಲ್ ಬ್ಯುಸಿಯಾಗಿದ್ದಾರೆ.

Most Popular

To Top