Film News

ಬೀಚ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಸ್ಯಾಂಡಲ್ ವುಡ್ ಬ್ಯೂಟಿ ಆಶಿಕಾ ರಂಗನಾಥ್, ವೈರಲ್ ಆದ ಪೊಟೋಸ್…!

ಕನ್ನಡ ಸಿನಿರಂಗದಲ್ಲಿ ಸಾಲು ಸಾಲು ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡಿರುವ ಆಶಿಕಾ ರಂಗನಾಥ್ ತೆಲುಗು ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಅನೇಕ ಕನ್ನಡದ ನಟಿಯರು ತೆಲುಗು ಸಿನೆಮಾಗಳಲ್ಲಿ ನಟಿಸುವ ಮೂಲಕ ಹವಾ ಸೃಷ್ಟಿಸಿದ್ದಾರೆ. ಅಮಿಗೋಸ್ ಎಂಬ ಸಿನೆಮಾದ ಮೂಲಕ ತೆಲುಗು ರಂಗಕ್ಕೆ ಎಂಟ್ರಿ ಕೊಟ್ಟ ಈ ಬ್ಯೂಟಿಗೆ ಈ ಸಿನೆಮಾ ಅಷ್ಟೊಂದು ಸಕ್ಸಸ್ ಕೊಡಲಿಲ್ಲ ಎಂದೇ ಹೇಳಬಹುದಾಗಿದೆ. ಆದರೂ ಇದೀಗ ಮತ್ತೋರ್ವ ಸ್ಟಾರ್‍ ನಟನ ಸಿನೆಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಗಳು ಕೇಳಿಬರುತ್ತಿವೆ.

ಕನ್ನಡದ ಬ್ಯೂಟಿ ಆಶಿಕಾ ರಂಗನಾಥ್ ಅಮಿಗೋಸ್ ಎಂಬ ಸಿನೆಮಾದಲ್ಲಿ ನಂದಮೂರಿ ಕಲ್ಯಾಣ್ ರಾಮ್ ಜೊತೆಗೆ ನಟಿಸಿದ್ದರು. ಇದೀಗ ಡಾರ್ಲಿಂಗ್ ಪ್ರಭಾಸ್ ಜೊತೆಗೆ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಮಾರುತಿ ನಿರ್ದೇಶನದಲ್ಲಿ ಮೂಡಿಬರಲಿರುವ ರಾಜ್ ಡಿಲಕ್ಸ್ ಸಿನೆಮಾದಲ್ಲಿ ಆಶಿಕಾ ನಟಿಸಲಿದ್ದಾರೆ. ಈ ಸಿನೆಮಾದಲ್ಲಿ ಒಟ್ಟು ಮೂರು ಮಂದಿ ಹಿರೋಯಿನ್ ಗಳಿರಲಿದ್ದು, ಅವರಲ್ಲಿ ಆಶಿಕಾ ರಂಗನಾ ಸಹ ಒಬ್ಬರಾಗಿದ್ದಾರಂತೆ. ಇನ್ನೂ ಈಗಾಗಲೇ ಆಶಿಕಾ ಸಿನೆಮಾದ ಶೂಟಿಂಗ್ ನಲ್ಲೂ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಸಿನೆಮಾಗಳ ಜೊತೆಗೆ ಆಶೀಕಾ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ.

ನಟಿ ಆಶಿಕಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೇ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡುತ್ತಿರುತ್ತಾರೆ. ಇದೀಗ ಆಕೆ ಕೆಲವೊಂದು ಲೇಟೆಸ್ಟ್ ಪೊಟೋಗಳನ್ನು ತನ್ನ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದರು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಬೀಚ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಶಿಕಾ ತುಂಬಾನೇ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಹೊರಬಂದಿದ್ದೇ ತಡ ಕಡಿಮೆ ಸಮಯದಲ್ಲೇ ಪೊಟೋಗಳು ಎಲ್ಲಾ ಕಡೆ ವೈರಲ್ ಆಗುತ್ತಿವೆ. ಜೊತೆಗೆ ಆಕೆಯ ಅಭಿಮಾನಿಗಳು ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ನಟಿ ಆಶಿಕಾ ಕ್ರೇಜಿ ಬಾಯ್ಸ್ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ಗ್ಯಾಪ್ ಇಲ್ಲದೇ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದಲ್ಲಿ ಎರಡು ಸಿನೆಮಾಗಳಲ್ಲಿ ಆಶಿಕಾ ನಟಿಸುತ್ತಿದ್ದಾರೆ. ಇದೀಗ ಪ್ರಭಾಸ್ ಜೊತೆಗೆ ರಾಜ್ ಡಿಲ್ಯಾಕ್ಸ್ ಸಿನೆಮಾದಲ್ಲೂ ಸಹ ಆಶಿಕಾ ನಟಿಸುತ್ತಿದ್ದಾರೆ. ಸದ್ಯ ಆಶಿಕಾ ಬ್ಯುಸಿಯಾಗಿ ಸಿನೆಮಾಗಳಲ್ಲಿ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ.

Most Popular

To Top