Film News

ಸ್ಯಾಂಡಲ್ ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಜನ್ಮದಿನದ ಸಂಭ್ರಮ, ಮತ್ತೆ ಸಿನೆಮಾಗಳಲ್ಲಿ ನಟಿಸುವಂತೆ ಅಭಿಮಾನಿಗಳ ಬೇಡಿಕೆ…..!

ಚಂದನವನದ ಸಿಂಡ್ರೆಲಾ ಎಂದೇ ಖ್ಯಾತಿ ಪಡೆದುಕೊಂಡಿರುವ ರಾಧಿಕಾ ಪಂಡಿತ್ ಮದುವೆಯಾದ ಬಳಿಕ ಸಿನೆಮಾಗಳಿಂದ ದೂರವೇ ಉಳಿದಿದ್ದಾರೆ. ರಾಕಿಂಗ್ ಸ್ಟಾರ್‍ ಯಶ್ ಹಾಗೂ ರಾಧಿಕಾ ಪಂಡಿತ್ ಮದುವೆಯಾದ ಬಳಿಕ ಆಕೆ ಕುಟುಂಬ ನಿರ್ವಹಣೆಯಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೆ ಆಕೆಯನ್ನು ದೊಡ್ಡ ಪರದೆಯ ಮೇಲೆ ನೋಡಲು ಅಭಿಮಾನಿಗಳೂ ಸಹ ಕಾಯುತ್ತಿದ್ದಾರೆ. ಮಾರ್ಚ್ 07 ರಂದು ನಟಿ ರಾಧಿಕಾ ಪಂಡಿತ್ ರವರ ಜನ್ಮ ದಿನವಾಗಿದ್ದು, ಆಕೆಗೆ ಅಭಿಮಾನಿಗಳು ಸೇರಿದಂತೆ ಅನೇಕರು ಶುಭಾಷಯಗಳ ಸುರಿಮಳೆಗೈದಿದ್ದಾರೆ. ಅನೇಕ ಅಭಿಮಾನಿಗಳು ಆಕೆಯನ್ನು ಮತ್ತೆ ಸಿನೆಮಾಗಳಲ್ಲಿ ನಟಿಸುವಂತೆ ಮನವಿ ಮಾಡುತ್ತಿದ್ದಾರೆ.

ನಟಿ ರಾಧಿಕಾ ಪಂಡಿತ್ ಕಳೆದ 1984 ಮಾರ್ಚ್ 7 ರಂದು ಜನಿಸಿದರು. ಮೊಗ್ಗಿನ ಮನಸ್ಸು ಸಿನೆಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ರಾಧಿಕಾ ಪಂಡಿತ್ ಮೊದಲನೇ ಸಿನೆಮಾದ ಮೂಲಕವೇ ಭಾರಿ ಫೇಮಸ್ ಆಗಿದ್ದಾರೆ. ಅವರಿಗೆ ಕನ್ನಡ ಸಿನಿರಂಗದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ದೊಡ್ಡ ಫ್ಯಾನ್ ಫಾಲೋಯಿಂಗ್ ಪಡೆದುಕೊಂಡಿದ್ದಾರೆ. ಸಿನೆಮಾಗಳಿಂದ ದೂರವಾದ ಬಳಿಕ ರಾಧಿಕಾ ಪಂಡಿತ್ ಸೋಷಿಯಲ್ ಮಿಡಿಯಾ ಮೂಲಕ ತನ್ನ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿ ಮಾಡಿಕೊಂಡು ಆಕೆ ತನ್ನ ವೈಯುಕ್ತಿಕ ಜೀವನ, ಕೆಲವೊಂದು ಹೆಲ್ತ್ ಟಿಪ್ಸ್ ಸೇರಿದಂತೆ ತನ್ನ ಮಕ್ಕಳೊಂದಿಗಿನ ಮುದ್ದಿನ ಪೊಟೋಗಳು, ವಿಡಿಯೋಗಳನ್ನು ಸಹ ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ನಟಿ ರಾಧಿಕಾ ಪಂಡಿತ್ ಸೋಷಿಯಲ್ ಮಿಡಿಯಾದಲ್ಲಿ ಅಷ್ಟೊಂದು ಆಕ್ಟೀವ್ ಆಗದೇ ಇದ್ದರೂ ಸಹ ಆಗಾಗ ಕೆಲವೊಂದು ಪೊಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸದ್ಯ ನಟನೆಯಿಂದ ದೂರವುಳಿದ ರಾಧಿಕಾ ಕುಟುಂಬ ನಿರ್ವಹಣೆಯಲ್ಲಿ ನಿರತರರಾಗಿದ್ದಾರೆ. ಇನ್ನೂ ರಾಧಿಕಾ ಪಂಡಿತ್ ರವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಹಾಗೂ ನೆಟ್ಟಿಗರು ಶುಭಾಷಯಗಳನ್ನು ಹರಿಬಿಡುತ್ತಿದ್ದಾರೆ. ಅನೇಕರು ಆಕೆಯನ್ನು ಮತ್ತೆ ದೊಡ್ಡ ಪರದೆಯ ಮೇಲೆ ನೋಡಲು ಕಾಯುತ್ತಿದ್ದಾರೆ. ಅನೇಕ ಬಾರಿ ಅಭಿಮಾನಿಗಳು ಮನವಿ ಸಹ ಮಾಡಿದ್ದಾರೆ. ಇನ್ನೂ ರಾಧಿಕಾ ಪಂಡಿತ್ ಸೋಷಿಯಲ್ ಮಿಡಿಯಾದಲ್ಲಿ ಆಗಾಗ ತಮ್ಮ ಮಕ್ಕಳೊಂದಿಗೆ ತೆಗೆದ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅವರು ಹಂಚಿಕೊಳ್ಳುವ ಪೊಟೋಗಳು ಪೋಸ್ಟ್ ಮಾಡಿದ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ.

Most Popular

To Top