Film News

ಬೀಚ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಸೀನಿಯರ್ ನಟಿ ಸುರೇಖಾವಾಣಿ, ಮದುವೆ ಆಗು ಎಂದ ಅಭಿಮಾನಿಗಳು…!

ಟಾಲಿವುಡ್ ನಲ್ಲಿ ತಮ್ಮದೇ ಆದ ಖ್ಯಾತಿ ಪಡೆದುಕೊಂಡ ಬಹುಬೇಡಿಕೆಯುಳ್ಳ ಕ್ಯಾರೆಕ್ಟರ್‍ ಆರ್ಟಿಸ್ಟ್ ಗಳಲ್ಲಿ ಸುರೇಖಾ ವಾಣಿ ಸಹ ಒಬ್ಬರು. ಅನೇಕ ಸಿನೆಮಾಗಳಲ್ಲಿ ಈಕೆ ತಮ್ಮ ನಟನೆಯ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಹ ಗಳಿಸಿಕೊಂಡಿದ್ದಾರೆ. ಆಂಕರ್‍ ಆಗಿ ಕೆರಿಯರ್‍ ಪ್ರಾರಂಭಿಸಿದ ಈಕೆ ನಟಿಯಾಗಿ, ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಖ್ಯಾತಿ ಪಡೆದುಕೊಂಡರು. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸುದ್ದಿಯಾಗುತ್ತಿದ್ದಾರೆ.

ನಟಿ ಸುರೇಖಾ ವಾಣಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟಿವ್ ಆಗಿರುತ್ತಾರೆ. ಕ್ಯಾರೆಕ್ಟರ್‍ ಆರ್ಟಿಸ್ಟ್ ಆದರೂ ಸಹ ಆಕೆ ಸೋಷಿಯಲ್ ಮಿಡಿಯಾದಲ್ಲಿ ಯಂಗ್ ನಟಿಯರನ್ನೂ ಮೀರಿಸುವಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಪೋಸ್ ಗಳ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಇನ್ನೂ ಆಕೆ ಹಂಚಿಕೊಳ್ಳುವಂತಹ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತವೆ. ಇನ್ನೂ ಆಕೆಯ ಹಾಟ್ ಪೊಟೋಗಳಿಗೆ ಫಿದಾ ಆದ ನೆಟ್ಟಿಗರೂ ಸಹ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳೂ ಸಹ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ನಟಿ ಸುರೇಖಾ ವಾಣಿ ಇತ್ತೀಚಿಗೆ ಬೀಚ್ ನಲ್ಲಿ ಎಂಜಾಯ್ ಮಾಡಿದ್ದಾರೆ. ಕಡಲ ತೀರದಲ್ಲಿ ಸುತ್ತಾಡುತ್ತಾ ಎಂಜಾಯ್ ಮಾಡಿದ್ದಾರೆ. ಇನ್ನೂ ಆಕೆ ತಮ್ಮ ಅಭಿಮಾನಿಗಳೊಂದಿಗೆ ಅಲ್ಲಿನ ಕೆಲವೊಂದು ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಆರೆಂಜ್ ಕಲರ್‍ ಶಾರ್ಟ್ ಧರಿಸಿ ಸಂಜೆ ಸಮಯದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಇನ್ನೂ ಸುರೇಖಾವಾಣಿ ಈ ಪೋಟೊಗಳನ್ನು ತನ್ನ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸುರೇಖಾವಾಣಿ ಅಭಿಮಾನಿಗಳು ಕ್ರೇಜಿ ಕಾಮೆಂಟ್ ಗಳ ಮೂಲಕ ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ಕೆಲವರಂತೂ ನೀವು ಅಷ್ಟೊಂದು ಸುಂದರವಾಗಿದ್ದೀರಾ, ಸೌಂದರ್ಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಮತ್ತೆ ಮದುವೆಯಾಗಿ ಎಂಬೆಲ್ಲಾ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಸುರೇಖಾ ವಾಣಿ ಮತ್ತೆ ಮದುವೆಯಾಗಲಿದ್ದಾರೆ ಎಂದೂ ಸಹ ಸುದ್ದಿಗಳು ಕೇಳಿಬರುತ್ತಿವೆ.

ಇನ್ನೂ ಸುರೇಖಾ ಪುತ್ರಿ ಸುಪ್ರೀತಾ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಇತ್ತಿಚಿಗೆ ಆಕೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಯೂಟೂಬರ್‍ ನಿಖಿಲ್ ವಿಜಯೇಂದ್ರ ಜೊತೆ ಸುಪ್ರೀತಾ ಪ್ರೇಮ ಪಯಣ ಸಾಗಿಸುತ್ತಿದ್ದಾರೆ ಎಂಬ ರೂಮರ್‍ ಗಳು ಕೇಳಿಬರುತ್ತಿವೆ.

Most Popular

To Top