Saturday, May 21, 2022
HomeEntertainmentಹಸೆಮಣೆ ಏರಿದ ನಟಿ ಶುಭಾ ಪೂಂಜಾ!

ಹಸೆಮಣೆ ಏರಿದ ನಟಿ ಶುಭಾ ಪೂಂಜಾ!

ಸ್ಯಾಂಡಲ್ ವುಡ್ ನಟಿ ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ನಾನು ಮತ್ತು ಸುಮಂತ್ ಗುರುಹಿರಿಯರು ಮತ್ತು ಆತ್ಮೀಯರ ಸಮ್ಮುಖದಲ್ಲಿ ನಮ್ಮ ಊರು ಮಜಲ ಬೆಟ್ಟು ಬಿಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲೆ ಇರಲಿ. ಎಲ್ಲರಿಗೂ ನಮಸ್ಕಾರಗಳು ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.

ಮಂಗಳೂರಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ನಡೆದಿದೆ. ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ ಮಜಾಭಾರತ ಖ್ಯಾತಿಯ ರಾಘು ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ಶುಭಾ ಅವರ ಮದುವೆ ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಹಲವಾರು ವರ್ಷಗಳಿಂದ ಸಮಾಜಸೇವಕ ಸುಮಂತ್ ಅವರನ್ನ ಪ್ರೀತಿಸುತ್ತಿದ್ದ ಶುಭ 2021 ಡಿಸಂಬರ್ ಅಥವಾ 2022 ಜನವರಿಯಲ್ಲಿ ಮದುವೆಯಾಗುವುದಾಗಿ ಹೇಳಿಕೊಂಡಿದ್ದರು.

ಸುಮಂತ್ ಅವರು ಉಡುಪಿಯಲ್ಲಿರುವುದು ಮತ್ತು ನಮ್ಮ ಕುಟುಂಬಸ್ಥರು ಮಂಗಳೂರಿನಲ್ಲಿರುವ ಕಾರಣ ನಾವು ಅಲ್ಲಿಯೇ ಮದುವೆಯಾಗುತ್ತೇವೆ ಎಂದು ಈ ಹಿಂದೆ ಶುಭಾ ಹೇಳಿದ್ದರು. ಅದರಂತೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

- Advertisement -

You May Like

More