News

ಮದ್ಯರಾತ್ರಿ ನಡು ರಸ್ತೆಯಲ್ಲಿ ಒಂಟಿ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ, ಕಾರಣವಾದ್ರು ಏನು?

ಕರ್ನಾಟಕದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾದ ಮಲ್ಲಾಫುರ ಪಿಜಿಯಲ್ಲಿ ಅಮಾನವೀವಯ ಘಟನೆಯೊಂದು ನಡೆದಿದೆ.  ಮಲ್ಲಾಪುರ ಪಿಜಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಈ ವೇಳೆ ಪುರುಷರು ಹಾಗೂ ಮಹಿಳೆಯರ ಗುಂಪು ಮಹಿಳೆಯೊಬ್ಬರಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಅಷ್ಟಕ್ಕೂ ಈ ಕೃತ್ಯಕ್ಕೆ ಕಾರಣವಾದರೂ ಏನು ಎಂಬ ವಿಚಾರಕ್ಕೆ ಬಂದರೇ,

ಬೆಳಗಾವಿಯ ಗೋಕಾಕ್ ತಾಲೂಕಿನ ಘಟಪ್ರಭಾದ ಮೃತ್ಯುಂಜಯ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಈ ಸರ್ಕಲ್ ನಲ್ಲಿ ಮಹಿಳೆಯರು ಹಾಗೂ ಪುರುಷರ ಗುಂಪು ಒಂಟಿ ಮಹಿಳೆಗೆ ಚಪ್ಪಲಿ ಹಾರ ಹಾಕಿ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಮಹಿಳೆ ಸ್ಥಳಿಯ ಕೆಲ ಉದ್ಯಮಿಗಳು, ವ್ಯಾಪಾರಿಗಳು ಹಾಗೂ ನೌಕರರನ್ನು ಹನಿಟ್ಯ್ರಾಪ್ ಮಾಡುವ ಮೂಲಕ ಹಣಕ್ಕೆ ಒತ್ತಾಯ ಮಾಡುತ್ತಿದ್ದಳು ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಆಕೆಯ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮಾಹಿತಿ ನೀಡಿ ಬಂಧಿಸುವಂತೆ ಮನವಿ ಸಹ ಮಾಡಲಾಗಿತ್ತಂತೆ. ಈ ನಡುವೆ ಆಕೆಯನ್ನು ಹಿಡಿದ ಸ್ಥಳೀಯರು ಹಲ್ಲೆ ಮಾಡಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ.ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕರನ್ನು ಹಲ್ಲೆಗೊಳಗಾದ ಮಹಿಳೆ ಹನಿಟ್ಯ್ರಾಪ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಾಳ ಎಂದು ಕಳೆದ ರಾತ್ರಿ ಮಹಿಳೆಯ ಮನೆಗೆ ಹೋದ ಕೆಲ ಮಹಿಳೆಯರು ಹಾಗೂ ಪುರುಷರು ಆಕೆಯನ್ನು ಪ್ರಶ್ನೆ ಮಾಡಿದ್ದಾರೆ. ಆ ಸಮಯದಲ್ಲಿ ಆ ಮಹಿಳೆಯ ತನ್ನನ್ನು ಪ್ರಶ್ನೆ ಮಾಡಲು ಬಂದಂತಹ ಗುಂಪಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳಂತೆ. ಅದರಿಂದ ಆಕ್ರೋಷಗೊಂಡ ಗುಂಪು ಆಕೆಯನ್ನು ಹಿಡಿದು ಹೊರತಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಆಕೆಯನ್ನು ಘಟಪ್ರಭಾ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸರಿಗೆ ಒಪ್ಪಿಸಿದ್ದು, ಸದ್ಯ ಹಲ್ಲೆಗೊಳಗಾದ ಮಹಿಳೆಯ ಪೊಲೀಸರ ಸುರ್ಪದಿಯಲ್ಲಿದ್ದಾಳೆ ಎಂದು ತಿಳಿದುಬಂದಿದೆ.

Most Popular

To Top