News

ಅನಾರೋಗ್ಯಕ್ಕೆ ಗುರಿಯಾದ ಕೆಚ್ಚೆದೆಯ ಕನ್ನಡತಿ ಅಕ್ಕ ಅನು, ಒಂದೆರಡು ನಿಮಿಷ ಸಮಯ ಸಿಕ್ಕರೆ ವಿವರವಾಗಿ ತಿಳಿದುಕೊಳ್ಳಿ ಎಂದ ಅನು….!

ಕರ್ನಾಟಕದಲ್ಲಿ ಕೆಚ್ಚೆದೆಯ ಕನ್ನಡತಿ ಅಕ್ಕ ಅನು ಎಂಬ ಪದ ಬಹುತೇಕ ಎಲ್ಲರಿಗೂ ತಿಳಿದೇ ಇದೆ. ಅನೇಕ ಊರುಗಳಲ್ಲಿನ ಸರ್ಕಾರಿ ಶಾಲೆಗಳಿಗೆ ಬಣ್ಣ ಹಚ್ಚುವುದು, ಪಾರಂಪಾರಿಕ ತಾಣಗಳ ಸ್ವಚ್ಚತೆ, ಪುನರುಜ್ಜೀವನ ಕೆಲಸಗಳಲ್ಲಿ ತೊಡಗಿಸಿಕೊಂಡು ಅನೇಕ ಯುವತಿಯರಿಗೆ ಮಾದರಿಯಾಗಿದ್ದಾರೆ. ಒಂದು ಹೆಣ್ಣು ಮಗಳು ಚಿಕ್ಕ ವಯಸ್ಸಿನಲ್ಲಿ ಓದಿನ ಜೊತೆಗೆ ಬಿಡುವು ಪಡೆದುಕೊಂಡು ಆಕೆ ಮಾಡುತ್ತಿರುವ ಸಮಾಜ ಸೇವೆಗೆ ಅನೇಕರ ಮೆಚ್ಚುಗೆ ಸಹ ದೊರೆತಿದೆ. ಆಕೆ ಯಾರ ಸಹಾಯ ಹಾಗೂ ಮೆಚ್ಚುಗೆಗೆ ಸಹ ಕಾಯದೇ ಕನ್ನಡತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸದ್ಯ ಸಮಾಜ ಸೇವಕಿ ಕೆಚ್ಚೆದೆಯ ಕನ್ನಡತಿ ಅಕ್ಕ ಅನು ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ. ಈ ಕಾರಣದಿಂದ ಆಕೆಯ ಕೆಲಸಗಳು ಸಹ ಹೆಚ್ಚಾಗಿದೆಯಂತೆ. ಇನ್ನೂ ಮುಂದೆ ನಿಮ್ಮ ಶಾಲೆ ಅಥವಾ ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ನಮಗಾಗಿ ಕಾಯದೇ ನೀವೇ ಬಗೆಹರಿಸಿಕೊಳ್ಳಿ ಎಂದು ಸುಧೀರ್ಘ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನನಗೆ ಕೆಲವು ಆರೋಗ್ಯ ಸಮಸ್ಯೆಯಿಂದ ನಾವು ಕನ್ನಡ ಶಾಲೆ ಉಳಿಸಿ ಅಭಿಯಾನ ಹಾಗೂ ಸಾಮಾಜಿಕ ಕಾರ್ಯಗಳಿಂದ ದೂರ ಉಳಿಯಬೇಕಾಯಿತು. ಸುಮಾರು ಜನ ಶಿಕ್ಷಕರು, SDMC ಅಧ್ಯಕ್ಷರು,ಹಾಗೂ ವಿದ್ಯಾರ್ಥಿಗಳ ಜೊತೆಗೆ ಸಾಮಾಜಿಕ ಕಳಕಳಿ ಹೊಂದಿರುವವರು ನನಗೆ ಕರೆ ಮಾಡ್ತಾನೆ ಇದ್ದೀರಿ. ನಾನು ಎಲ್ಲರಿಗೂ ಕೆಲಸ ಬಿಟ್ಟಿದೀವಿ ಅನಾರೋಗ್ಯ ಅಂತ ಪ್ರತಿಯೊಬ್ಬರಿಗೂ ಹೇಳಲು ಕಷ್ಟವಾಗುತ್ತಿದೆ. ಆದ್ದರಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಇದೊಂದು ವಿಷಯವನ್ನು ಹೇಳಲೇ ಬೇಕಾಯಿತು.

ಮುಂದೊಂದು ದಿನ ನಮ್ಮ ಆರೋಗ್ಯ ಹಾಗೂ ನಮ್ಮ ಜೀವನ ಉತ್ತಮ ಮಟ್ಟದಲ್ಲಿ ಸಾಗಿದ್ರೆ ಖಂಡಿತ ನಾವೂ ಹಾಗೂ ನಮ್ಮ ತಂಡ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲವೂ ಸರಿಹೊಂದಿದರೆ ನೋಡೋಣ. ಆಗಂತ ನಿಮ್ಮ ಊರಿನ ಶಾಲೆಗಳಿಗೆ ನಾವೇ ಬರ್ತೀವಿ ಅಂತ ಭಾವಿಸಬೇಡಿ.
ಯಾಕೆಂದ್ರೆ ಈಗಾಗಲೇ ನಮ್ಮ ಲಿಸ್ಟ್ ನಲ್ಲಿ 75ಕ್ಕೂ ಹೆಚ್ಚು ಶಾಲೆಗಳು ಪೆಂಡಿಂಗ್ ನಲ್ಲಿ ಇವೆ. ದಯವಿಟ್ಟು ನಿಮ್ಮ ಊರಿನ ಸಮಸ್ಯೆಗಳಿಗೆ ಕೆಲಸಗಳಿಗೆ ನಾವೇ ಬಂದು ಕೆಲಸ ಮಾಡಬೇಕು ಅಂತ ಏನಿಲ್ಲ. ನಿಮ್ಮ ಊರಿನ ಶಾಲೆಗಳ ಕೆಲ್ಸಗಳನ್ನ ನೀವೇ ಮುಗಿಸಿಕೊಂಡ್ರೆ ತುಂಬಾನೇ ಒಳ್ಳೇದು. ಯಾಕೆಂದ್ರೆ ಸುಮಾರು ಜನ ನಾವು ಇಂದಲ್ಲ ನಾಳೆ ಬರ್ತಿವಿ ನಿಮ್ಮ ಊರಿಗೆ ಅಂತ ದಿನಗಳನ್ನ ಮುಂದೂಡುತ್ತಲೇ ಇದ್ದೀರಿ ಆದ್ರೆ ನಮ್ಮ ಸಮಸ್ಯೆಗಳಿಂದ ನಾವು ಯಾರಿಗೂ ಸ್ಪಂದಿಸಲು ಆಗುತ್ತಿಲ್ಲ ಕ್ಷಮಿಸಬೇಕು ನೀವೆಲ್ಲಾ ತೊಂದರೆ ಆದ್ರೆ ಈ ನಂಬರ್ ಆಫ್ ಮಾಡಿ ಅಂತ ಕೆಲವರು ಹೇಳ್ತ ಇದಿರಿ ಕೆಲವು ದಾಖಲಾತಿ ಗಳಿಗೆ ಇದೇ ನಂಬರ್ ಇರುವುದರಿಂದ ನಂಬರ್ ಚೇಂಜ್ ಮಾಡಲು ಆಗುತ್ತಿಲ್ಲ. ಕೆಲವು ಕಮಿಟ್ಮೆಂಟ್ ಹಾಗೂ ಮುಖ್ಯವಾದ ಆತ್ಮೀಯರ ಸಲುವಾಗಿ ಮೊಬೈಲ್ ನಂಬರ್ ನ ಚಾಲ್ತಿಯಲ್ಲಿ ಇಡಬೇಕಾಯಿತು.

ನಿಮ್ಮಿಂದ ನಂಗೆ ಸಹಾಯವೇನೆಂದರೆ ನಿಮ್ಮ ಊರಿನ ಸಮಸ್ಯೆಗಳನ್ನ ನೀವೇ ಬಗೆಹರಿಸಿಕೊಂಡರೆ ತುಂಬಾ ಒಳ್ಳೇದು ಯಾಕೆಂದ್ರೆ ನಾನು ಈ ಕಾರ್ಯವನ್ನ ಏನೋ ದೊಡ್ಡ ಮಟ್ಟದಲ್ಲಿ ಕೆಲಸ ಮಾಡಿ ಹೆಸರು ಮಾಡಬೇಕು ಅನ್ನೋದು ಇದಿಲ್ಲ. ನನ್ನ ಜೀವನದಲ್ಲಿ ನಡೆದ ಒಂದಿಷ್ಟು ಘಟನೆಗಳಿಂದ ಪ್ರೇರಿತಳಾಗಿ ಒಂದು ಚಿಕ್ಕ ಬದಲಾವಣೆ ತರ್ಬೇಕು ಅಂದ್ರೆ ಶಿಕ್ಷಣ.ಹಾಗೂ ಆರೋಗ್ಯವಾಗಿ ಜನಗಳು ಬದುಕೋಕೆ ವೈಯಕ್ತಿಕ ಸ್ವಚ್ಛತೆಯಿಂದ ಹಾಗೂ ಪರಿಸರ ಸ್ವಚ್ಛತೆಯ ಅವಶ್ಯಕತೆ ನನ್ನ ಭಾರತದಲ್ಲಿ ಬಹಳ ಅವಶ್ಯಕತೆ ಇರುವುದರಿಂದ ಒಂದೆರಡು ಜನಗಳಿಗೆ ಆದ್ರೂ ನಮ್ಮ ಕಾರ್ಯಗಳು ತಿಳಿಲಿ ಅಂತ ಒಂದಿಷ್ಟು ಅಭಿಯಾನಗಳನ್ನ ಕೈಗೊಂಡೆ ಅಷ್ಟೇ ಎಂದು ಪೋಸ್ಟ್ ಮಾಡಿದ್ದು, ಆಕೆಯ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

Most Popular

To Top