Film News

ಟ್ರೆಂಡಿ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದ ಚಂದಮಾಮ ಕಾಜಲ್ ಅಗರ್ವಾಲ್….!

ಸೌತ್ ಸಿನಿರಂಗದಲ್ಲಿ ಅನೇಕ ಸ್ಟಾರ್‍ ಗಳ ಜೊತೆಗೆ ಅನೇಕ ಹಿಟ್ ಸಿನೆಮಾಗಳನ್ನು ನೀಡಿದ ನಟಿ ಕಾಜಲ್ ಅಗರ್ವಾಲ್ ಲಕ್ಷ್ಮೀ ಕಲ್ಯಾಣಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಕಡಿಮೆ ಸಮಯದಲ್ಲೇ ಸ್ಟಾರ್‍ ಡಮ್ ಗಿಟ್ಟಿಸಿಕೊಂಡರು. ಮೊದಲನೇ ಸಿನೆಮಾದ ಮೂಲಕವೇ ಅನೇಕ ಯುವಕರ ಕನಸಿನ ರಾಣಿಯಾದರು. ಮದುವೆಯಾದ ಬಳಿಕ ಕಾಜಲ್ ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ಕೆಲವೊಂದು ಕ್ರೇಜಿ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸೊಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಸುಮಾರು ವರ್ಷಗಳ ಕಾಲ ತೆಲುಗು ಸಿನಿರಂಗದಲ್ಲಿ ಬಹುಬೇಡಿಕೆ ನಟಿಯಾಗಿದ್ದ ಕಾಜಲ್ ಅಗರ್ವಾಲ್ ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸದ್ದು ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಕಾಜಲ್ ತನ್ನ ಸಿನೆಮಾಗಳ ಜೊತೆಗೆ ವೈಯುಕ್ತಿಕ ವಿಚಾರಗಳನ್ನೂ ಸಹ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಕಳೆದ 2020 ರ ಅಕ್ಟೋಬರ್‍ 30 ರಂದು ಮುಂಬೈನಲ್ಲಿ ಕಾಜಲ್ ಅಗರ್ವಾಲ್ ಉದ್ಯಮಿ ಗೌತಮ್ ಕಿಚ್ಲು ಎಂಬಾತನನ್ನು ವಿವಾಹವಾದರು. ಕಳೆದ ವರ್ಷ ಏಪ್ರಿಲ್ 19 ರಂದು ಮುದ್ದಾದ ಗಂಡು ಮಗುವಿಗೂ ಸಹ ಜನ್ಮ ಕೊಟ್ಟರು. ಮದುವೆ, ಮಗು ಕಾರಣದಿಂದ ಆಕೆ ಸಿನೆಮಾಗಳಿಂದ ದೂರವೇ ಇದ್ದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿಯೇ ಇದ್ದರು.

ಇನ್ನೂ ಕಾಜಲ್ ತಮಿಳಿನಲ್ಲಿ ಘೋಸ್ಟಿ ಎಂಬ ಹಾರರ್‍ ಸಿನೆಮಾದಲ್ಲಿ ನಟಿಸಿದ್ದು, ಯುಗಾದಿ ಹಬ್ಬದಂದು ಈ ಸಿನೆಮಾ ರಿಲೀಸ್ ಆಗಲಿದೆ. ಈ ಸಿನೆಮಾದ ಪ್ರಮೋಷನ್ ಭಾಗವಾಗಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಟ್ರೆಂಡಿ ವೇರ್‍ ನಲ್ಲಿ ಎಲ್ಲೋ ಕಲರ್‍ ಪ್ರಿಂಟೆಡ್ ಶರ್ಟ್‌ನಲ್ಲಿ, ಬ್ಲೂ ಭಾಗಿ ಟೈಮ್ ಜೀನ್ಸ್ ನಲ್ಲಿ ತುಂಬಾ ಸ್ಟೈಲೀಷ್ ಆಗಿ ಕಾಣಿಸಿಕೊಂಡಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳ ಜೊತೆಗೆ, ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ತಾಯಿಯಾದರೂ ಸಹ ಆಕೆ ಸೌಂದರ್ಯ ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಲಾಗುತ್ತಿದೆ. ಇನ್ನೂ ಆಕೆಯ ಈ ಪೊಟೋಗಳಿಗೆ ಅಭಿಮಾನಿಗಳೂ ಸೇರಿದಂತೆ ಅನೇಕರು ಲೈಕ್ ಗಳು ಕಾಮೆಂಟ್ ಗಳ ಮೂಲಕ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕಾಜಲ್ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಒಳ್ಳೆಯ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಿದ್ದಾರೆ. ಕಮಲ್ ಹಾಸನ್ ಹಾಗೂ ಶಂಕರ್‍ ಕಾಂಬಿನೇಷನ್ ನ ಇಂಡಿಯನ್-2 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ನಂದಮೂರಿ ಬಾಲಕೃಷ್ಣ ಜೊತೆ NBK108 ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಆಕೆ ಮತಷ್ಟು ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಇನ್ನೂ ಯುಗಾದಿ ಹಬ್ಬದಂದು ಆಕೆ ಘೋಸ್ಟಿ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದು, ಈ ಸಿನೆಮಾ ಯಾವ ರೀತಿಯಲ್ಲಿ ಸಕ್ಸಸ್ ಕಾಣಲಿದೆ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top