News

ಗೋಮಾಂಸ ಸಾಗಿಸುತ್ತಿದ್ದ ವಾಹನಗಳನ್ನು ತಡೆದ ಶ್ರೀರಾಮಸೇನೆ ಕಾರ್ಯಕರ್ತರು, ಕಾರಿಗೆ ಬೆಂಕಿ ಹಚ್ಚಿ ಆಕ್ರೋಷ….!

ಕರ್ನಾಟಕದ ದೊಡ್ಡಬಳ್ಳಾಪುರ ನಗರದ ಟಿಬಿ ಕ್ರಾಸ್ ಸರ್ಕಲ್ ಬಳಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ತಡೆದಿದ್ದಾರೆ. ಸುಮಾರು 15 ಟನ್ ಗೋಮಾಂಸವನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ವೇಳೆ ವಾಹನ ತಡೆದ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಯತ್ನ ಮಾಡಲು ಬಂದಿದ್ದರಿಂದ ಮಾಂಸ ಸಾಗಾಟ ಮಾಡುತ್ತಿದ್ದ ವಾಹನಕ್ಕೆ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಷ ಹೊರಹಾಕಿದ್ದಾರೆ.

ಅಕ್ರಮವಾಗಿ ಸುಮಾರು 15 ಟನ್ ಗೋಮಾಂಸವನ್ನು ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದ ಮೂಲಕ ತೆರಳುತ್ತಿದ್ದ ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ. ನಾಲ್ಕು ವಾಹನಗಳಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಹಿಂದೂಪುರ ಹಾಗೂ ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ದೊಡ್ಡಬಳ್ಳಾಪುರದ ಮೂಲಕ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಈ ಮಾಹಿತಿಯನ್ನು ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ವಾಹನಗಳನ್ನು ತಡೆದಿದ್ದಾರೆ. ಬಳಿಕ ವಾಹನದಲ್ಲಿದ್ದವರ ತಲೆ ಮೇಲೆ ಹಸುಗಳ ರುಂಡಗಳನ್ನು ಇರಿಸಿ ಹಲ್ಲೆ ಮಾಡಲಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾನೂನು ಕೈಗೆತ್ತಿಕೊಳ್ಳದಂತೆ ಎಚ್ಚರಿಕೆ ಸಹ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಸ್ಥಳಕ್ಕೆ ಆಗಮಿಸಿದ ದೊಡ್ಡಬಳ್ಳಾಪುರ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಿಂದಾಗಿ ಆಕ್ರೋಷ ಸಹ ವ್ಯಕ್ತವಾಗುತ್ತಿದೆ. ಇನ್ನೂ ಪೊಲೀಸರು ಸಿಸಿ ಟಿವಿ ಯನ್ನು ಪರಿಶೀಲನೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಇಂಚಿಂಚು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Trending

To Top