News

ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿವೆ ಸ್ಟಾಫ್ ನರ್ಸ್ ಹುದ್ದೆಗಳು…..!

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ತೆಯಲ್ಲಿ ನೂರು ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ಖಾಲಿ ಇರುವಂತಹ ನೂರು ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಕೆಇಎ ಅಧಿಕೃತವಾಗಿ ಅಧಿಸೂಚನೆಯನ್ನು ಸಹ ಹೊರಡಿಸಿದೆ. ಅ.4 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್‍ 2 ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಇನ್ನೂ ಹುದ್ದೆಗಳ ವಿವರಕ್ಕೆ ಬಂದರೇ ಒಟ್ಟು 100 ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯಾಗಿದ್ದು, ಈ ಪೈಕಿ 92 ಉಳಿಕೆ ಮೂಲ ವೃಂದಕ್ಕೆ ಹಾಗೂ 8 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿದೆ. ಡಿಪ್ಲೊಮ ನರ್ಸಿಂಗ್ / ಬಿಎಸ್ಸಿ ನರ್ಸಿಂಗ್ ಉತ್ತೀರ್ಣರಾಗಿ, ನರ್ಸಿಂಗ್ ಕೌನ್ಸಿಲ್‌ನಲ್ಲಿ ರಿಜಿಸ್ಟ್ರೇಷನ್‌ ಪಡೆದಿರಬೇಕು. ಕನಿಷ್ಟ 18 ವರ್ಷ, ಗರಿಷ್ಠ 35 ವಯೋಮಿತಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 2ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದವರಿಗೆ 33,450 ರೂ ನಿಂದ 62,600 ರೂವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಇನ್ನೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್​ 4ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ನವೆಂಬರ್​ 2 ಕೊನೆಯ ದಿನ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ನವೆಂಬರ್​ 4 ಆಗಿದೆ. ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ 750, ಪರಿಶಿಷ್ಟ ಜಾತಿ ಹಾಗೂ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ ಪಾವತಿ ಮಾಡಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು kea.kar.nic.in ಭೇಟಿ ನೀಡಬಹುದಾಗಿದೆ.

Most Popular

To Top