ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಅನಸೂಯ, ಫ್ಲೈಯಿಂಗ್ ಕಿಸ್ ಕೊಡುತ್ತಾ ಪೋಸ್ ಕೊಟ್ಟ ಸ್ಟಾರ್ ಬ್ಯೂಟಿ…..!

Follow Us :

ಸ್ಟಾರ್‍ ಆಂಕರ್‍ ಕಂ ನಟಿ ಅನಸೂಯ ಭಾರದ್ವಾಜ್ ರವರ ಬಗ್ಗೆ ಹೆಚ್ಚಿನ ಪರಿಚಯ ಅಗತ್ಯವಿಲ್ಲ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಅನಸೂಯ ಇದೀಗ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ತನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದು, ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಅನಸೂಯ ಹೈದರಾಬಾದ್ ನಲ್ಲಿ 1985 May 15 ರಂದು ಹುಟ್ಟಿದರು. ಈ ಹುಟ್ಟುಹಬ್ಬವನ್ನು ಅನಸೂಯ ತನ್ನ ಕುಟುಂಬದೊಂದಿಗೆ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. 38ನೇ ವಸಂತಕ್ಕೆ ಕಾಲಿಟ್ಟ ಈಕೆ ಎಂಬಿಎ ಪದವಿ ಪಡೆದುಕೊಂಡರು. ಬಳಿಕ ಆಕೆ ಖಾಸಗಿ ಕಂಪನಿಯೊಂದರಲ್ಲಿ ಸಹ ಕೆಲಸ ಮಾಡಿದ್ದರು. ಕೆಲವೊಂದು ಚಾನಲ್ ಗಳಲ್ಲಿ ಆಂಕರ್‍ ಆಗಿ ಕಾಣಿಸಿಕೊಂಡ ಈಕೆ ಜಬರ್ದಸ್ತ್ ಶೋ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಇದೀಗ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಮತಷ್ಟು ಹತ್ತಿರವಾಗಿದ್ದಾರೆ. ಇನ್ನೂ ನಟಿ ಅನಸೂಯ ತನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.  ತನ್ನ ಕುಟುಂಬದೊಂದಿಗೆ ಕೇಕ್ ಕತ್ತರಿಸುವ ಮೂಲಕ ಕೇಕ್ ಕಟ್ ಮಾಡಿ ಆಚರಿಸಿಕೊಂಡಿದ್ದಾರೆ.

ಇನ್ನೂ ಅನಸೂಯ ಹುಟ್ಟುಹಬ್ಬದ ಅಂಗವಾಗಿ ಕೆಲವೊಂದು ಪೊಟೋಗಳನ್ನು ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಕುಟುಂಬಸ್ಥರು, ತನ್ನ ಮಕ್ಕಳು ಹಾಗೂ ಪತಿಯೊಂದಿಗೆ ಇರುವಂತಹ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳ ಜೊತೆಗೆ ಕ್ರೇಜಿ ಕಾಮೆಂಟ್ ಸಹ ಮಾಡಿದ್ದಾರೆ. ಮತ್ತೊಂದು ವರ್ಷ ಬುದ್ದಿವಂತಿಕೆಯಿಂದ, ಮತ್ತೊಂದು ವರ್ಷ ಧೈರ್ಯದಿಂದ ಇರುತ್ತದೆ ಎಂದು ಹೇಳಿದ್ದಾರೆ. ಜೊತೆಗೆ ನನಗೆ ಹುಟ್ಟುಹಬ್ಬದ ಶುಭಾಷಯಗಳನ್ನು ತಿಳಿಸಿದ ಪ್ರತಿಯೊಬ್ಬರಿಗೂ ಶುಭಾಷಯಗಳನ್ನು ತಿಳಿಸಿದ್ದಾರೆ. ನನ್ನನ್ನು ಪ್ರೀತಿಸುವವರು, ನನಗೆ ಸಪೋರ್ಟ್ ಮಾಡುವಂತಹವರಿಗೆ ಧನ್ಯವಾದಗಳು ಎಂದಿದ್ದಾರೆ. ಇನ್ನೂ ಅನಸೂಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳೂ ಸೇರಿದಂತೆ ಅನೇಕ ಸೆಲೆಬ್ರೆಟಿಗಳು ಗಣ್ಯರು ಶುಭಾಷಯಗಳನ್ನು ಕೋರಿದ್ದಾರೆ.

ಇನ್ನೂ ನಟಿ ಅನಸೂಯ ಹಂಚಿಕೊಂಡ ಕೆಲವೊಂದು ಪೊಟೋಗಳು ಸಹ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಬ್ಲೂ ಕಲರ್‍ ಸೀರೆಯನ್ನು ಉಟ್ಟು, ಡೀಪ್ ನೆಕ್ ಬ್ಲೌಜ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಗಳನ್ನು ಸಹ ಕೊಟ್ಟಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಟ್ ಕಾಮೆಂಟ್ ಗಳನ್ನು ಮಾಡುತ್ತಾ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರುತ್ತಿದ್ದಾರೆ. ಇನ್ನು ನಟಿ ಅನಸೂಯ ಪುಷ್ಪಾ-2 ಹಾಗೂ ವಿಮಾನಂ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.