Film News

ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ ಸ್ಟಾರ್ ನಟ ಪವನ್ ಕಲ್ಯಾಣ್…..!

ದೇಶದಲ್ಲಿ ಸದ್ಯ ಬಿಸಿಲಿನ ತಾಪಕ್ಕಿಂತ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ ಎಂದು ಹೇಳಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾನಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಕೆಲವು ಕಡೆ ಸಿನೆಮಾ ಸೆಲೆಬ್ರೆಟಿಗಳನ್ನು ಕರೆತಂದು ಪ್ರಚಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ತೆಲುಗು ಸ್ಟಾರ್‍ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶದಲ್ಲೂ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಒಟ್ಟಿಗೆ ನಡೆಯುತ್ತಿದೆ. ಈ ಭಾರಿ ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. ನಟ ಪವನ್ ಕಲ್ಯಾಣ್ ಸಹ ಆಂಧ್ರದ ಪಿಟಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ತಮ್ಮ ಮೈತ್ರಿ ಕೂಟವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಭಾರಿ ಮಟ್ಟದಲ್ಲೇ ಚುನಾವಣೆ ಪ್ರಚಾರ ನಡೆಯುತ್ತಿದೆ. ಈ ನಡುವೆ ಕರ್ನಾಟಕದಲ್ಲೂ ಸಹ ನಟ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಕರ್ನಾಟಕದ ಗಡಿ ಭಾಗದಲ್ಲಿ ತೆಲುಗು ಪ್ರಭಾವ ಕೊಂಚ ಹೆಚ್ಚಾಗಿಯೇ ಇದೆ. ಇದರಿಂದ ಆಂಧ್ರದ ಸೆಲೆಬ್ರೆಟಿಗಳನ್ನು ಕರೆತಂದು ಪ್ರಚಾರ ಮಾಡಲಾಗುತ್ತಿದೆ ಎನ್ನಲಾಗಿದೆ.

ಇನ್ನೂ ಆಂಧ್ರ ಕರ್ನಾಟಕ ಗಡಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಸ್ಟಾರ್‍ ನಟ ಪವನ್ ಕಲ್ಯಾಣ್ ಎಂಟ್ರಿ ಕೊಡಲಿದ್ದಾರೆ. ಗಡಿ ಭಾಗದ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ತಮ್ಮ ಮೈತ್ರಿ ಪಕ್ಷವಾದ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ರವರನ್ನು ಕರ್ನಾಟಕ ಗಡಿ ಭಾಗಗಳಾದ ರಾಯಚೂರು, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರಿನಲ್ಲೂ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ಏಪ್ರಿಲ್ 17 ರಂದು ಕರ್ನಾಟಕದ ಈ ಭಾಗದಲ್ಲಿ ಪವನ್ ಕಲ್ಯಾಣ್ ಅಬ್ಬರಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲೂ ಸಹ ಪವನ್ ಕಲ್ಯಾಣ್ ರವರಿಗೆ ಭಾರಿ ಅಭಿಮಾನಿ ಬಳಗವಿದೆ. ಮಾಜಿ ಸಚಿವ ಡಾ.ಕೆ.ಸುಧಾಕರ್‍ ರವರು ಕಳೆದ ವಿಧಾನಸೌಧ ಚುನಾವಣಾ ಸಮಯದಲ್ಲೂ ಕೆಲ ಸಿನೆಮಾ ಸೆಲೆಬ್ರೆಟಿಗಳನ್ನು ಕರೆತಂದು ಪ್ರಚಾರ ಮಾಡಿಸಿದ್ದರು. ಇದೀಗ ಪವನ್ ಕಲ್ಯಾಣ್ ಪ್ರಚಾರ ಮಾಡಲಿದ್ದಾರೆ.

Most Popular

To Top