Cinema

ಕರೋನ ಸಂಕಷ್ಟ ಸಮಯದಲ್ಲಿ, ಮತ್ತೆ ನಾಲಕ್ಕು ಶಾಲೆಗಳನ್ನು ದತ್ತು ಪಡೆದ ಕಿಚ್ಚ ಸುದೀಪ್! ಕಿಚ್ಚನಿಗೊಂದು ಸಲಾಂ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಟ್ರಸ್ಟ್ ವತಿಯಿಂದ ಕಷ್ಟದಲ್ಲಿರುವ ಜನರಿಗೆ ನೆರವಾಗಿ ನಿಂತಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಕಿಚ್ಚ ಸುದೀಪ್ ಅವರ ಟ್ರಸ್ಟ್ ವತಿಯಿಂದ ಆಹಾರವಿಲ್ಲದೆ ಕಷ್ಟ ಪಡುತ್ತಿರುವ ಜನರಿಗೆ ಮತ್ತು ಮೂಕ ಪ್ರಾಣಿಗಳಿಗೆ ಪ್ರತಿದಿನ ಆಹಾರ ಒಡಗಿಸಲಾಗಿತ್ತು. ಕೆಲ ದಿನಗಳ ಹಿಂದೆ, ಕಷ್ಟದಲ್ಲಿದ್ದ ಶಾಲಾ ಮಗುವನ್ನು ದತ್ತು ಪಡೆದು ಆಕೆಯ ಸ್ಕೂಲ್ ಫೀಸ್ ಅನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಾವತಿಸಲಾಗಿತ್ತು. ಕಿಡ್ನಿ ಸಮಸ್ಯೆ ಹೊಂದಿದ್ದ ಆಶಾ ಕಾರ್ಯಕರ್ತೆಯೊಬ್ಬರ ಮಗನ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಭರಿಸಿತ್ತು. ಹೇಳುತ್ತಾ ಹೋದರೆ ಇನ್ನು ಹಲವಾರು ಉದಾಹರಣೆಗಳು ಸಿಗುತ್ತವೆ. ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಳಳಿಗೆ ಶೂಗಳನ್ನು ವಿತರಿಸಿದ್ದರು ಸುದೀಪ್. ಹೀಗೆ ಹಲವಾರು ರೀತಿಯಲ್ಲಿ ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ನೀಡಿದ್ದಾರೆ. ಇತ್ತೀಚೆಗೆ ತಂಗಿ ಮದುವೆ ಮಾಡಲು ಕಷ್ಟದಲ್ಲಿದ್ದ ಆಟೋ ಡ್ರೈವರ್ ಗೆ ಸಹಾಯ ಮಾಡಿದ್ದರು.

ಪಿಯುಸಿ ಪರೀಕ್ಷೆ 94% ಅಂಕ ಗಳಿಸಿದ ಬೆಂಗಳೂರಿನ ವಿದ್ಯಾರ್ಥಿನಿಗೆ ಸಹಾಯ ಮಾಡಿದ್ದರು. ಇದಾದ ನಂತರ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯ “ಶಾಲೆಗಾಗಿ ನಾವು-ನೀವು..” ಎಂಬ ಹೊಸ ಅಭಿಯಾನದಿಂದ ಕೆಲ ದಿನಗಳ ಹಿಂದೆ ಚಿತ್ರದುರ್ಗದಲ್ಲಿ 4 ಶಾಲೆಗಳನ್ನು ಸಹ ದತ್ತು ಪಡೆದಿದ್ದರು. ಇದೀಗ ಮಲೆನಾಡಿಗೆ ಸೇರಿದ ಶಿವಮೊಗ್ಗಜಿಲ್ಲೆಯಲ್ಲಿ ಸಹ ನಾಲ್ಕು ಶಾಲೆಗಳನ್ನು ದತ್ತು ಪಡೆದಿದೆ ಕಿಚ್ಚ ಸುದೀಪ್ ಅವರ ಸಂಸ್ಥೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಮತ್ತು ಎಸ್.ಎನ್.ನಗರಗಳಲ್ಲಿರುವ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ತೆಗೆಡಿಕೊಳ್ಳಲಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ, ಇಂಟರ್‌ನೆಟ್ ವ್ಯವಸ್ಥೆ, ಶೌಚಾಲಯ ನಿರ್ಮಾಣ, ಗ್ರಂಥಾಲಯ ವ್ಯವಸ್ಥೆ, ಕಂಪ್ಯೂಟರ್, ಕೊಠಡಿಗಳ ರಿಪೇರಿ, ಶಿಕ್ಷಕರಿಗೆ ಲಾಕರ್ ವ್ಯವಸ್ಥೆ, ಪರಿಶುದ್ಧವಾದ ಅಡುಗೆ ಕೋಣೆ, ಶುದ್ಧ ಕುಡಿಯುವ ನೀರಿನ ಘಟಕ, ಆಟದ ಸಾಮಗ್ರಿಗಳು ಇನ್ನಿತರ ಅವಶ್ಯಕತೆ ಇರುವ ವಸ್ತುಗಳನ್ನು ಪೂರೈಸಲು ಸುದೀಪ್ ಅವರ ಟ್ರಸ್ಟ್ ನಿರ್ಧರಿಸಿದೆ.

ಕಿಚ್ಚ ಸುದೀಪ್ ಅವರ ಸಂಸ್ಥೆಯಿಂದ ನಡೆಯುತ್ತಿರುವ ಈ ಕೆಲಸದ ಬಗ್ಗೆ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.. “ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು..” ಎಂದು ಟ್ವೀಟ್ ಮಾಡಿದ್ದಾರೆ ಸಚಿವರು.

Trending

To Top