Film News

ಆರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ವಿಕ್ರಾಂತ್ ರೋಣ

ಬೆಂಗಳೂರು: ಕಳೆದ ರಾತ್ರಿಯಷ್ಟೆ ಕನ್ನಡ ಕಂಪನ್ನು ದುಬೈನಲ್ಲಿ ಸಾರಿದ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರ ಸುಮಾರು 50 ದೇಶಗಳಲ್ಲಿ 6 ಭಾಷೆಗಳಲ್ಲಿ ಬಿಡುಗಡೆಯಾಗಲಿದೆಯಂತೆ. ಜಗತ್ತಿನ ಅತೀ ಎತ್ತರದ ಕಟ್ಟಡವಾದ ಬುರ್ಜಾ ಖಲೀಫ ಮೇಲೆ ವಿಕ್ರಾಂತ್ ರೋಣ ಟೈಟಲ್ ಅನಾವರಣ ಹಾಗೂ ಟೀಸರ್ ಬಿಡುಗಡೆಗೆ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ.

ಇನ್ನೂ ವಿಕ್ರಾಂತ್ ರೋಣ ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದ ಮಾಹಿತಿಯಂತೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ, ಮಲಯಾಳಂ, ಇಂಗ್ಲೀಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಭಾರತದಲ್ಲಿ ಮಾತ್ರವಲ್ಲದೇ 50 ಕ್ಕೂ ಹೆಚ್ಚು ದೇಶಗಳಲ್ಲಿ ವಿಕ್ರಾಂತ್ ರೋಣ ಬಿಡುಗಡೆಯಾಗಲಿದೆ. ಇನ್ನೂ ಈ ಕುರಿತು ಕಿಚ್ಚ ಸುದೀಪ್ ರವರೇ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆರು ಭಾಷೆಯಲ್ಲಿ ವಿಕ್ರಾಂತ್ ರೋಣ ಟೈಟಲ್ ಪೋಸ್ಟರ್ ಗಳನ್ನು ಹಂಚಿಕೊಂಡಿದ್ದಾರೆ.

ಇನ್ನೂ ವಿಕ್ರಾಂತ್ ರೋಣ ಟೀಸರ್ ಬಿಡುಗಡೆಗೆ ಬುರ್ಜಾ ಖಲೀಫಾ ಜಾಹಿರಾತಿಗೆ ಆದ ಖರ್ಚು ಎಷ್ಟು ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಿಲ್ಲ. ಆದರೆ ಮೂರು ನಿಮಿಷಗಳ ಈ ಜಾಹಿರಾತು ಪ್ರದರ್ಶನಕ್ಕೆ ಸುಮಾರು 80 ಲಕ್ಷ ಆಗಬಹುದು ಅಥವಾ ಇನ್ನೂ ಹೆಚ್ಚಾಗಬಹುದೆಂದು ಊಹಿಸಲಾಗುತ್ತಿದೆ. ಅಷ್ಟೇ ಅಲ್ಲದೇ ಕಿಚ್ಚ ಸುದೀಪ್ ರವರ ದುಬೈನಲ್ಲಿನ ಕಾರ್ಯಕ್ರಮಕ್ಕೆ ಸುಮಾರು 3 ಕೋಟಿಗೂ ಹೆಚ್ಚು ಖರ್ಚಾಗಿರಬಹುದೆಂದು ಹೇಳಲಾಗುತ್ತಿದೆ.

ಇಡೀ ವಿಶ್ವದಲ್ಲಿನ ಕಿಚ್ಚ ಸುದೀಪ್ ಅಭಿಮಾನಿಗಳು ನಿನ್ನೆಯ ಬುರ್ಜಾ ಖಲೀಫಾ ದಲ್ಲಿ ನಡೆದ ಕಾರ್ಯಕ್ರಮದ ವಿಡಿಯೋ, ಪೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಈ ಕಾರ್ಯಕ್ರಮ ಇಡೀ ಕನ್ನಡಿಗರಿಗೆ ಹೆಮ್ಮೆ ಎಂದೇ ಹೇಳಲಾಗುತ್ತಿದೆ.

Trending

To Top