Film News

ಶೀಘ್ರದಲ್ಲೇ ಸುದೀಪ್ ಅಭಿನಯದ ಕೋಟಿಗೊಬ್ಬ-3 ಸಾಂಗ್ಸ್ ರಿಲೀಸ್!

ಬೆಂಗಳೂರು: ಅಭಿನಯ ಚಕ್ರವರ್ತಿ ಸುದೀಪ್ ಹಾಗೂ ನಿರ್ದೇಶಕ ಶಿವ ಕಾರ್ತಿಕ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಕೋಟಿಗೊಬ್ಬ-3 ಚಿತ್ರದ ಹಾಡುಗಳು ಶೀಘ್ರದಲ್ಲೇ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿದೆ.

ಕಳೆದೆರಡು ದಿನಗಳ ಹಿಂದೆಯಷ್ಟೆ ಕಿಚ್ಚ ಸುದೀಪ್ ರವರು ಸಿನೆಮಾ ರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದುಬೈನಲ್ಲಿ ಅದ್ದೂರಿ ಕಾರ್ಯಕ್ರಮದ ಜೊತೆಗೆ ವಿಕ್ರಾಂತ್ ರೋಣ ಚಿತ್ರದ ಟೀಸರ್ ಹಾಗೂ ಟೈಟಲ್ ಬಿಡುಗಡೆಯಾಗಿದ್ದು ಅಭಿಮಾನಿಗಳು ತಮ್ಮ ನಟನನ್ನು ಕಂಡು ಸಂತಸಗೊಂಡಿದ್ದರು. ಇದೀಗ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಶೀಘ್ರದಲ್ಲೇ ದೊರೆಯಲಿದೆಯಂತೆ. ಮೂಲಗಳ ಪ್ರಕಾರ ಕೋಟಿಗೊಬ್ಬ-3 ಚಿತ್ರ ಏಪ್ರಿಲ್ 29 ರಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ಚಿತ್ರದ ಹಾಡುಗಳನ್ನು ಸಹ ಬಿಡುಗಡೆ ಮಾಡುವ ಯೋಚನೆ ಮಾಡುತ್ತಿದ್ದಾರಂತೆ.

ಕೋಟಿಗೊಬ್ಬ-3 ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ಇದೇ ಮಾರ್ಚ್ 28 ರಂದು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ. ಇನ್ನೂ ಈ ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ಪ್ಲಾನ್ ಮಾಡಿದ್ದು, ಕಾರ್ಯಕ್ರಮದಲ್ಲಿ ಯಾರೆಲ್ಲಾ ಗಣ್ಯರು ಭಾಗವಹಿಸಲಿದ್ದಾರೆ ಎಂಬುದು ಬಹಿರಂಗವಾಗಿಲ್ಲ. ಈ ಬಗ್ಗೆ ಅಭಿಮಾನಿಗಳು ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

ಇನ್ನೂ ಕೋಟಿಗೊಬ್ಬ-3 ಚಿತ್ರದಲ್ಲಿ ದೊಡ್ಡ ಕಲಾವಿದರ ಬಳಗವೇ ಇದ್ದು, ನಿರ್ಮಾಪಕ ಸೂರಪ್ಪ ಬಾಬು ಬಂಡವಾಳ ಹಾಕಿದ್ದಾರೆ. ಸುದೀಪ್ ರವರಿಗೆ ನಾಯಕಿಯಾಗಿ ಮಲಯಾಳಂ ನಟಿ ಮಡೋನ್ನಾ ಸೆಬಾಸ್ಟಿಯನ್ ಬಣ್ಣ ಹಚ್ಚಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

Trending

To Top