News

ತೆಲಂಗಾಣದಲ್ಲಿ ಎಬಿವಿಪಿ ವಿದ್ಯಾರ್ಥಿನಿಯ ಕೂದಲು ಹಿಡಿದು ಎಳೆದೊಯ್ದ ಮಹಿಳಾ ಪೊಲೀಸರು, ವೈರಲ್ ಆದ ವಿಡಿಯೋ….!

ತೆಲಂಗಾಣ ರಾಜ್ಯದ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಎಬಿವಿಪಿ ಸಂಘಟನೆಯ ವಿದ್ಯಾರ್ಥಿನಿಯ ಕೂದಲು ಹಿಡಿದು ಮಹಿಳಾ ಪೊಲೀಸರು ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ಹಾಗೂ ಬಿ.ಆರ್‍.ಎಸ್ ಪಕ್ಷ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ತೆಲಂಗಾಣದ ರಾಜ್ಯ ಕೃಷಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಜಯಶಂಖಕರ್‍ ರವರಿಗೆ ಸೇರಿದ ಜಾಗವನ್ನು ನೂತನ ಹೈಕೋರ್ಟ್ ಸಂಕೀರ್ಣ ನಿರ್ಮಿಸಲು ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ಮಂಜೂರು ಮಾಡುವ ನಿರ್ಧಾರ ತೆಗೆದುಕೊಂಡಿದ್ದು, ಈ ಸಂಬಂಧ ತೆಲಂಗಾಣ ಸರ್ಕಾರದ ವಿರುದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿನಿಯ ಕೂದಲನ್ನು ಎಳೆದುಕೊಂಡು ಇಬ್ಬರು ಮಹಿಳಾ ಪೊಲೀಸರು ಹೋಗುತ್ತಿದ್ದಾರೆ. ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಆ ವಿದ್ಯಾರ್ಥಿನಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಸದಸ್ಯಳಾಗಿದ್ದು, ತೆಲಂಗಾಣ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಳು ಎಂದು ಹೇಳಲಾಗಿದೆ.

ಇನ್ನೂ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ತೀವ್ರ ಆಕ್ರೋಷ ಹೊರಹಾಕಿದ ಬಿಜೆಪಿ ಹಾಗೂ ಬಿ.ಆರ್‍.ಎಸ್ ಕೂಡಲೇ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ, ಮಾನವ ಹಕ್ಕುಗಳ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಸಹ ಮಾಡಿದೆ.  ಇನ್ನೂ ಈ ಬಗ್ಗೆ ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಷ್ಣುವರ್ಧನರೆಡ್ಡಿ ತಮ್ಮ ಟ್ವಿಟರ್‍ ಖಾತೆಯಲ್ಲಿ ಆಕ್ರೋಷ ಹೊರಹಾಕಿದ್ದಾರೆ. ಜೊತೆಗೆ ಸ್ಮೃತಿ ಇರಾನಿಯವರನ್ನು ಟ್ಯಾಗ್ ಮಾಡಿ ಅಸಭ್ಯ ಕೃತ್ಯದ ವಿಡಿಯೋ ಹಂಚಿಕೊಂಡಿದ್ದಾರೆ. ಜೊತೆಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್‍ ಪುತ್ರಿ ಕೆ.ಕವಿತಾ ಸಹ ತೆಲಂಗಾಣ ಪೊಲೀಸರು ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

Most Popular

To Top