ಉಡುಪಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಸಿಐಡಿ ಗೆ ವಹಿಸಿ ರಾಜ್ಯ ಸರ್ಕಾರ ಆದೇಶ

Follow Us :

ಕರ್ನಾಟಕದ ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಅನ್ಯ ಕೋಮಿನ ವಿದ್ಯಾರ್ಥಿನಿಯರ ವಿರುದ್ದ ರಾಜ್ಯ ಮಾತ್ರವಲ್ಲದೇ ದೇಶದಾದ್ಯಂತ ಭಾರಿ ಆಕ್ರೋಷ ವ್ಯಕ್ತವಾಗಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಘಟನೆಯ ಬಗ್ಗೆ ಜು.26 ರಂದು ಸುಮೊಟೋ ಕೇಸ್ ದಾಖಲಾಗಿತ್ತು. ಜೊತೆಗೆ ರಾಜ್ಯದಾಧ್ಯಂತ ಭಾರಿ ಕೋಲಾಹಲ, ಪ್ರತಿಭಟನೆ ಸೇರಿದಂತೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಣ ವಾಕ್ ಸಮರ, ಸಂಘರ್ಷಕ್ಕೂ ಕಾರಣವಾಗಿತ್ತು. ಈ ಪ್ರಕರಣವನ್ನು ಸೂಕ್ತ ತನಿಖೆ ಮಾಡುವಂತೆ ಎಬಿವಿಪಿ, ಬಿಜೆಪಿ ಸೇರಿದಂತೆ ಕೆಲವೊಂದು ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ಮಾಡಿದ್ದವು. ಇದೀಗ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಸುಮಾರು ಒಂದು ವರ್ಷದಿಂದ ಈ ಕೃತ್ಯ ನಡೆಯುತ್ತಿದ್ದರೂ ಸಹ ಆಡಳಿತ ಮಂಡಳಿ ಯಾವುದೆ ಕ್ರಮಕ್ಕೆ ಮುಂದಾಗಿಲ್ಲ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದರು. ಸುಮಾರು ಒಂದು ವರ್ಷದಿಂದ ಕಾಲೇಜನ ಶೌಚಾಲಯಗಳಲ್ಲಿ ಮೊಬೈಲ್ ಇಟ್ಟು, ವಿಡಿಯೋ ಚಿತ್ರೀಕರಣ ಮಾಡಿ ಬಳಿಕ ಆ ಮೊಬೈಲ್ ಕಾರು ಹಾಗೂ ಬೈಕ್ ಗಳಲ್ಲಿ ಬರುವಂತಹ ಯುವಕರಿಗೆ ನೀಡುತ್ತಿದ್ದರು. ಈ ಬಗ್ಗೆ ಆಡಳಿತ ಮಂಡಳಿಗೆ ದೂರು ಸಹ ನೀಡಲಾಗಿತ್ತು ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದರು. ಇನ್ನೂ ಆರೋಪಿತ ವಿದ್ಯಾರ್ಥಿನಿಯರು ಈ ತಮಾಷೆಗಾಗಿ ಈ ವಿಡಿಯೋ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದೂ ಸಹ ಹೇಳಲಾಗಿತ್ತು. ಈ ಘಟನೆಯ ಬಗ್ಗೆ ಜೋರಾದ ಚರ್ಚೆಗಳು ನಡೆಯುತ್ತಿದ್ದಂತೆ ಆಡಳಿತ ಮಂಡಲಿ ಆರೋಪಿತ ಮೂವರು ವಿದ್ಯಾರ್ಥಿನಿಯರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿತ್ತು.