ಹೆಣ್ಣು ವಿದ್ಯಾರ್ಥಿಗಳಿಗೆ ಪ್ರತಿ ಮಾಹೆ ಪಿರಿಯಡ್ಸ್ ರಜೆ ಘೋಷಣೆ ಮಾಡಿದ ವಿಶ್ವವಿದ್ಯಾಲಯ…..!

Follow Us :

ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು ಪಿರಿಯಡ್ಸ್ ಬರೋದು ಸಹಜ. ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು 2023 ರ ಜನವರಿಯಲ್ಲಿ ಮುಟ್ಟಿನ ರಜೆಯನ್ನು ಪ್ರಾರಂಭಿಸಿದ ದೇಶದ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯ ಸಹ 2024-25ರ ಶೈಕ್ಷಣಿಕ ವರ್ಷದ ಮುಂಬರುವ ಸೆಮಿಸ್ಟರ್‍ ಗಳಿಂದ ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ನೀಡಲು ಹೊಸ ನೀತಿಯನ್ನು ಜಾರಿಗೆ ತರುವುದಾಗಿ ಪಂಜಾಬ್ ವಿಶ್ವವಿದ್ಯಾಲಯದ ಉಪ ಕುಲಪತಿಗಳು ತಿಳಿಸಿದ್ದಾರೆ.

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಇನ್ನು ಮುಂದೆ ಪ್ರತಿ ಮಾಹೆ ಹೆಣ್ಣು ವಿದ್ಯಾರ್ಥಿಗಳ ಋತುಚಕ್ರದ ಸಮಯದಲ್ಲಿ ಒಂದು ದಿನದ ಮಟ್ಟಿಗೆ ರಜೆ ನೀಡಲು ಹೊಸ ನೀತಿಯನ್ನು ಜಾರಿಗೆ ತಂದಿದೆ. ಇಂತಹ ಘೋಷಣೆಯನ್ನು ಕಳೆದ ವರ್ಷವೇ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಜಾರಿ ಮಾಡಿತ್ತು. ಇದೀಗ ಪಂಜಾಬ್ ವಿಶ್ವವಿದ್ಯಾಲಯ ಸಹ ಈ ರೀತಿಯ ನೀತಿಯನ್ನು ಜಾರಿಗೊಳಿಸುವುದಾಗಿ ತಿಳಿಸಿದೆ. ಇನ್ನೂ ರಜೆಯನ್ನು ಪಡೆಯಲು ವಿದ್ಯಾರ್ಥಿನಿಯರು ಕಚೇರಿಯಲ್ಲಿ ನಮೂನೆಯನ್ನು ಭರ್ತಿ ಮಾಡಿ ಅಧ್ಯಕ್ಷರು ಅಥವಾ ನಿರ್ದೇಶಕರಿಂದ ಅನುಮೋದನೆ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳ ಸ್ವಯಂ ಪ್ರಮಾಣೀಕರಣದ ಆಧಾರದ ಮೇಲೆ ರಜೆಯನ್ನು ನೀಡಲಾಗುತ್ತದೆ ಎನ್ನಲಾಗಿದೆ.

ಆದರೆ ಮದ್ಯ ಸೆಮಿಸ್ಟರ್‍ ಹಾಗೂ ಅಂತಿಮ ಸೆಮಿಸ್ಟರ್‍ ಪರೀಕ್ಷೆಗಳು, ಆಂತರಿಕ, ಬಾಹ್ಯ ಅಥವಾ ಪ್ರಾಯೋಗಿಕ ಪರೀಕ್ಷೆಗಳು ಸೇರಿದಂತೆ ಯಾವುದೇ ಪರೀಕ್ಷೆಗಳ ಸಮಯದಲ್ಲಿ ಈ ರಜೆ ನೀಡಲಾಗುವುದಿಲ್ಲ ಎನ್ನಲಾಗಿದೆ. ತಿಂಗಳಿಗೆ ಒಂದು ದಿನ ಮಟ್ಟಿಗೆ ಮಾತ್ರ ರಜೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಎರಡು ಅಥವಾ ಅದಕ್ಕಿಂತ ಹೆಚ್ಚು ದಿನಗಳವರೆಗೆ ತೆಗೆದುಕೊಂಡರೇ ಪರಿಗಣಿಸಲಾಗುವುದಿಲ್ಲ. ಜೊತೆಗೆ ಪರೀಕ್ಷಾ ಸಮಯದಲ್ಲಿ ಈ ರಜೆಯನ್ನು ನೀಡಲಾಗುವುದಿಲ್ಲ ಎಂದು ಪಂಜಾಬ್ ವಿಶ್ವವಿದ್ಯಾಲಯದ ಉಪಕುಲಪತಿಗಳು ಮಾಹಿತಿ ನೀಡಿದ್ದಾರೆ.