News

ನೆರೆ ಮನೆಯ ಯುವಕನ ಜೊತೆ ನಡೆದ ಜಗಳ, ವ್ಯಕ್ತಿಯ ಮರ್ಮಾಂಗವನ್ನೇ ಕಟ್ ಮಾಡಿದ ಮಹಿಳೆ…!

ಅನೇಕ ಕಡೆ ಆಗಾಗ ಕೆಲವೊಂದು ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಜಗಳದಿಂದ ಮಹಿಳೆಯೊಬ್ಬರು ವ್ಯಕ್ತಿಯ ಜನನಾಂಗವನ್ನೇ ಕತ್ತರಿಸಿದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಮಹಿಳೆಯನ್ನು ಅಲ್ಲಿನ ಪೊಲೀಸರು ಬಂಧಿಸಿದ್ದು, ಚಾಕುವನ್ನು ವಶಕ್ಕೆ ಪಡೆದುಕೊಂಡಿದ್ದು, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಶರೀಫ್ ಪುರ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ಮಂಗಳವಾರ ಮದ್ಯಾಹ್ನ 32 ವರ್ಷದ ಮಹಿಳೆಯೊಬ್ಬರು ಪಕ್ಕದ ಮನೆಯ ಯುವಕನೊಂದಿಗೆ ಜಗಳವಾಡಿದ್ದಾಳೆ. ಬಳಿಕ ಆತನ ಜನನಾಂಗವನ್ನು ಕತ್ತರಿಸಿದ್ದಾಳೆ. ಗಾಯಗೊಂಡ ವ್ಯಕ್ತಿ ಪ್ರಯಾಗರಾಜ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಇನ್ನೂ 26 ವರ್ಷದ ಈ ವ್ಯಕ್ತಿಯ ತಂದೆ ಮಹಿಳೆಯ ವಿರುದ್ದ ಐಪಿಸಿ ಸೆಕ್ಷನ್ 326 ಹಾಗೂ 308 ಅಡಿಯಲ್ಲಿ ಎಫ್.ಐ.ಆರ್‍ ದಾಖಲಿಸಿದ್ದಾರೆ.

ಆರೋಪಿ ಮಹಿಳೆ ನನ್ನ ಮಗನನ್ನು ಏನೋ ಕೆಲಸಕ್ಕಾಗಿ ತನ್ನ ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ ಏನೋ ವಿಚಾರಕ್ಕೆ ಗಲಾಟೆಯಾಗಿದೆ. ಈ ವೇಳೆ ಮಗನ ಮೇಲೆ ಹಲ್ಲೆ ನಡೆಸಿದ್ದಾಳೆ. ಪಕ್ಕದ ಮನೆಯೊಳಗೆ ನನ್ನ ಮಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಕಂಡು ಕೌಶಂಬಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಆದರೆ ವೈದ್ಯರು ಅವರನ್ನು ಚಿಕಿತ್ಸೆಗಾಗಿ ಪ್ರಯಾಗ್ ರಾಜ್ ಗೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. ಇನ್ನೂ ಮಹಿಳೆಯ ಪತಿ ಯುಎಇ ನಲ್ಲಿ ವಾಸ ಮಾಡುತ್ತಿದ್ದಾರೆ. ಇನ್ನೂ ಗಲಾಟೆಯ ವೇಳೆ ಬಳಸಿದ್ದಂತಹ ಚಾಕುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಗಲಭೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Most Popular

To Top